ಯಾದಗಿರಿ: ಬಾವಿಯಲ್ಲಿ ಮೀನು ಹಿಡಿಯಲು ಹೋದ ಬಾಲಕರಿಬ್ಬರು ನೀರು ಪಾಲಾಗಿದ್ದಾರೆ. ಈ ಘಟನೆ ನಗರದ ವಣಿಕೇರಿ ಲೇಔಟ್ನಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದೆ. ಶಾಲೆಗೆ ಬಂಕ್ ಹಾಕಿ ನಾಲ್ವರು ಸ್ನೇಹಿತರು ಬಾವಿಯಲ್ಲಿ ಮೀನು ಹಿಡಿಯುತ್ತಿದ್ದರು.
ನಕುಲ್(12), ನಿಹಾಲ್ ಸಿಂಗ್(12) ಮೃತ ಬಾಲಕರು. ಬಾವಿಯಲ್ಲಿ ಮೀನು ಹಿಡಿಯುತ್ತಿರುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಶವ ಹೊರ ತೆಗೆದಿದ್ದಾರೆ. ಮೃತ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಯಾದಗಿರಿ: ಈಜು ಬಾರದೆ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು