ETV Bharat / state

ಯಾದಗಿರಿ: ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ - ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಆಲಿಕಲ್ಲು ಮಳೆ

ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಆಲಿಕಲ್ಲು ಮಳೆಯಿಂದ ಬೇಸಿಗೆ ಹಂಗಾಮಿನಲ್ಲಿ ಬೆಳೆಯಲಾದ ಭತ್ತ ಮತ್ತು ಸಜ್ಜೆ ಬೆಳೆಗಳು ಹಾನಿಯಾಗಿದ್ದವು. ಬೆಳೆಗಳು ಹಾನಿಯಾದ ಪ್ರದೇಶಕ್ಕೆ​​ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
author img

By

Published : Apr 13, 2020, 11:34 PM IST

ಯಾದಗಿರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ ನೀಡಿ ಪರಿಶೀಲಿಸಿದರು.

ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಕಳೆದ ಏಪ್ರಿಲ್ 7ರಂದು ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಆಲಿಕಲ್ಲು ಮಳೆಯಿಂದ ಬೇಸಿಗೆ ಹಂಗಾಮಿನಲ್ಲಿ ಬೆಳೆಯಲಾದ ಭತ್ತ ಮತ್ತು ಸಜ್ಜೆ ಬೆಳೆಗಳು ಹಾನಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಹಾಪುರ ಮತ್ತು ವಡಗೇರಾ ತಾಲೂಕಿನ ಐಕೂರ್, ಅನಕಸೂಗೂರು, ಕುರಿಹಾಳ ಮತ್ತು ತುಮಕೂರು ಗ್ರಾಮಗಳಲ್ಲಿ ಬೆಳೆಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ರೈತರು ಹಾಗೂ ಅಧಿಕಾರಿಗಳಿಂದ ಹಾನಿಯಾದ ಬಗ್ಗೆ ಮಾಹಿತಿ ಪಡೆದರು.

ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ತಕ್ಷಣ ವರದಿ ಸಲ್ಲಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸುರೇಶ ಅಂಕಲಗಿ ಮತ್ತು ಶಹಾಪುರ ಸಹಾಯಕ ಕೃಷಿ ನಿರ್ದೇಶಕ ಗೌತಮ ಹಾಜರಿದ್ದರು.

For All Latest Updates

TAGGED:

Yadgir
ETV Bharat Logo

Copyright © 2025 Ushodaya Enterprises Pvt. Ltd., All Rights Reserved.