ETV Bharat / state

ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ.. 4 ಎಫ್‌ಐಆರ್, 18 ಮಂದಿ ವಶಕ್ಕೆ - ಯಾದಗಿರಿ

ಯಾದಗಿರಿಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ – 4 ಎಫ್‌ಐಆರ್ -18 ಜನ ವಶಕ್ಕೆ- ಯಾದಗಿರಿ ಜಿಲ್ಲಾ ಎಸ್​​ಪಿ ಡಾ.ಸಿ.ಬಿ ವೇದಮೂರ್ತಿ ಮಾಹಿತಿ.

BJP Congress activists Clash case update
ಎಸ್​​ಪಿ ಡಾ.ಸಿ.ಬಿ ವೇದಮೂರ್ತಿ
author img

By

Published : Apr 7, 2023, 11:20 AM IST

ಎಸ್​​ಪಿ ಡಾ.ಸಿ.ಬಿ ವೇದಮೂರ್ತಿ ಮಾಹಿತಿ ನೀಡಿರುವುದು..

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆಯಲ್ಲಿ 10ಕ್ಕೂ ಹೆಚ್ಚು ಕಾರುಗಳು ಜಖಂಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟಗಾಯಗಳಾಗಿವೆ. ಈ ಸಂಬಂಧ ನಾಲ್ಕು ಪ್ರಕರಣಗಳನ್ನು ದಾಖಲಿಸಿಕೊಂಡು 18 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಯಾದಗಿರಿ ಜಿಲ್ಲಾ ಎಸ್​ಪಿ ಡಾ.ಸಿ.ಬಿ ವೇದಮೂರ್ತಿ ತಿಳಿಸಿದ್ದಾರೆ.

144 ಸೆಕ್ಷನ್ ಜಾರಿ: ಈ ಕುರಿತು ಪ್ರತಿಕ್ರಿಯಿಸಿದ ಅವರು "ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಮೂರು ಕೆಎಸ್ಆರ್​ಪಿ ಮತ್ತು ಒಂದು ಪ್ಯಾರಾ ಮಿಲಿಟರಿ ಫೋರ್ಸ್ ಕಂಪನಿ, ಇಬ್ಬರು ಡಿಎಸ್​ಪಿ, 100 ಮಂದಿ ಪೊಲೀಸ್​ ಕಾನ್ಸ್​ಟೇಬಲ್​​, ಐದು ಮಂದಿ ಸಿಪಿಐ ಮತ್ತು 10 ಮಂದಿ ಪಿಎಸ್ಐ ಅವರನ್ನು ನೇಮಿಸಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸುರಪುರ ಮತ ಕ್ಷೇತ್ರದಾದ್ಯಂತ ಏ.6 ಸಂಜೆ 8 ಗಂಟೆಯಿಂದ ಏ.8 ರವರೆಗೆ ಸಂಜೆ 8 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಒಟ್ಟಾರೆಯಾಗಿ ದಾಖಲಾದ ನಾಲ್ಕು ಪ್ರಕರಣಗಳಲ್ಲಿ 120 ಜನ ಆರೋಪಿಗಳು ಭಾಗಿಯಾಗಿದ್ದು, ದಸ್ತಗಿರಿ ಕ್ರಮ ಮುಂದುವರೆದಿದೆ" ಎಂದು ತಿಳಿಸಿದರು.

ಆರೋಪಿಗಳಿಗೆ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ: ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಹಾಗೂ ಅವರ ಬೆಂಬಲಿಗರೊಂದಿಗೆ ಚುನಾವಣೆ ಪ್ರಚಾರಕ್ಕೆ ಎಂದು ನಾರಾಯಣಪುರ ಗ್ರಾಮಕ್ಕೆ ಪ್ರಯಾಣ ಬೆಳೆಸುತ್ತಿರುವ ಸಂದರ್ಭದಲ್ಲಿ ಕೊಡೇಕಲ್ ಪಟ್ಟಣದ ಬಿಜೆಪಿ ಕಾರ್ಯಕರ್ತರು ಏಕಾಏಕಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಹಾಗೂ ವಾಹನಗಳ ಮೇಲೆ ಕಲ್ಲು ತೋರಾಟ ನಡೆಸಿದ್ದರು. ಈ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇಂದು ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹುಣಸಗಿ ಪಟ್ಟಣದ ಸಿಪಿಐ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಆಗಮಿಸಿ ಕ್ರಮದ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ಹಿಂಪಡೆಯಲಾಗಿದೆ.

ಪ್ರಕರಣದ ಹಿನ್ನೆಲೆ: ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಪರಸ್ಪರ ಕಲ್ಲು ತೂರಾಟ ಹಾಗೂ 10ಕ್ಕೂ ಹೆಚ್ಚು ಕಾರುಗಳು ಜಖಂಗೊಳಿಸಿರುವ ಘಟನೆ ಗುರುವಾರ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್‌ನಲ್ಲಿ ಸಂಭವಿಸಿತ್ತು. ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಸುರಪುರ ಸಂಸ್ಥಾನದ ಅರಸ ರಾಜಾ ಕೃಷ್ಣಪ್ಪ ನಾಯಕ ಮತ್ತು ಶಾಂತಗೌಡ ಚನ್ನಪಟ್ಟಣ ಅವರ ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.

ಕೊಡೇಕಲ್ ಗ್ರಾಮದಲ್ಲಿ ಕಾಲಜ್ಞಾನಿ ಬಸವಣ್ಣ ಪಲ್ಲಕ್ಕಿ ಉತ್ಸವ ನಡೆದಿತ್ತು. ಇದರಿಂದ ಭಾರಿ ಪ್ರಮಾಣದಲ್ಲಿ ಭಕ್ತರು ಸೇರಿದ್ದರು. ಇದರಿಂದ ವಾಹನಗಳು ಹೋಗಲು ದಾರಿಗಾಗಿ ಹಾರ್ನ್ ಮಾಡಿದ್ದಾರೆ. ಇದೇ ಗಲಾಟೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾರಿಗೆ ಅಡ್ಡವಾಗಿ ಕಾರೊಂದನ್ನು ನಿಲ್ಲಿಸಿರುವುದೂ ವಾಗ್ವಾದಕ್ಕೆ ಎಡೆಮಾಡಿಕೊಟ್ಟಿದೆ ಎನ್ನಲಾಗಿದೆ. ಪೊಲೀಸರು ಗಲಾಟೆ ತಡೆಯಲು ಸಾಕಷ್ಟು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಘಟನೆಯಿಂದ ಕೊಡೇಕಲ್ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್​ ಬಂದೋಬಸ್ತ್​ ಒದಗಿಸಲಾಗಿದೆ.

ಇದನ್ನೂ ಓದಿ: ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ : 10ಕ್ಕೂ ಹೆಚ್ಚು ಕಾರುಗಳು ಜಖಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.