ETV Bharat / state

ಎಸ್​ಎಸ್​​ಎಲ್​ಸಿ ಪರೀಕ್ಷೆಗೆ ಸಕಲ ಸಿದ್ಧತೆ, ವಿದ್ಯಾರ್ಥಿಗಳು ಆತಂಕ ಪಡುವುದು ಬೇಡ: ಜಿಲ್ಲಾಧಿಕಾರಿ

ಯಾದಗಿರಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್​ ಸುದ್ದಿಗೋಷ್ಠಿ ನಡೆಸಿ, ಎಸ್ಎಸ್​ಎಲ್​ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

yadgir DC kurma rao
ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
author img

By

Published : Jun 24, 2020, 5:47 PM IST

ಯಾದಗಿರಿ: ನಾಳೆಯಿಂದ ಆರಂಭವಾಗಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಜಿಲ್ಲೆಯ 59 ಕೇಂದ್ರಗಳಲ್ಲಿ ಎಸ್​ಒಪಿ ಪ್ರಕಾರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೋಡಿಯಂ ಹೈಪೋಕ್ಲೋರೈಡ್ ಬಳಸಿ ಸ್ಯಾನಿಟೈಸ್ ಮಾಡಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ಅರಿವು ಮೂಡಿಸಲು ಮುದ್ರಿಸಿರುವ ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಆಯಾ ಪರೀಕ್ಷಾ ಕೇಂದ್ರಗಳಲ್ಲಿ ವಿತರಣೆ ಮಾಡಲಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್

ಶಾಲಾ ಹಂತದಲ್ಲಿ ಕೂಡ ಪೋಷಕರ ಸಭೆ ನಡೆಸಲಾಗಿದೆ. ಜನಪ್ರತಿನಿಧಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಸುಳ್ಳು ವದಂತಿಗಳಿಗೆ ಕಿವಿಗೊಡದೆ ನಿರಾತಂಕವಾಗಿ ಪರೀಕ್ಷೆ ಬರೆಯಬಹುದು. ಜಿಲ್ಲೆಯಲ್ಲಿ 52 ಮುಖ್ಯ ಪರೀಕ್ಷಾ ಕೇಂದ್ರಗಳು ಮತ್ತು 7 ಉಪ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದ್ದು, ಒಟ್ಟು 870 ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಈ ಕೇಂದ್ರಗಳು ಕಂಟೈನ್ಮೆಂಟ್ ಝೋನ್‍ಗಳಲ್ಲಿಲ್ಲ. ಶಹಾಪುರ ತಾಲೂಕಿನ 5007 ವಿದ್ಯಾರ್ಥಿಗಳು, ಸುರಪುರ ತಾಲೂಕಿನ 5837, ಯಾದಗಿರಿ ತಾಲೂಕಿನ 6552 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 17,396 ಮಕ್ಕಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದರು.

ಕೊರೊನಾ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ: ಜಿಲ್ಲೆಯಲ್ಲಿ ಕಂಟೈನ್​ಮೆಂಟ್​ ಝೋನ್ ವಿದ್ಯಾರ್ಥಿಗಳು ಕೂಡ ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದು. ಒಂದು ವೇಳೆ ವಿದ್ಯಾರ್ಥಿ ಕೋವಿಡ್ ಪಾಸಿಟಿವ್ ಎಂದು ಗುರುತಿಸಲ್ಪಟ್ಟಿದ್ದಲ್ಲಿ ಅಂತಹ ವಿದ್ಯಾರ್ಥಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ ನೀಡಿ, ಅದನ್ನು “ಪ್ರಥಮ ಅವಕಾಶ” ಎಂದು ಪರಿಗಣಿಸಲಾಗುವುದು. ಸಾಮಾನ್ಯ ಜ್ವರ, ಕೆಮ್ಮು ಹಾಗೂ ಇನ್ನಿತರ ರೋಗ ಲಕ್ಷಣಗಳಿರುವ ಅಭ್ಯರ್ಥಿಗಳಿಗಾಗಿ ಪ್ರತಿ ಕೇಂದ್ರದಲ್ಲಿ 2 ಹೆಚ್ಚುವರಿ ಕೋಣೆಗಳನ್ನು ನಿಗದಿಪಡಿಸಲಾಗಿದೆ. ಪೋಷಕರು ಆತಂಕ ಪಡುವ ಬದಲು ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಪರೀಕ್ಷೆಗೆ ಕಳುಹಿಸುವಂತೆ ತಿಳಿಸಿದರು.

ಬಸ್‍ಗಳಲ್ಲಿ ಉಚಿತ ಪ್ರಯಾಣ: ವಿದ್ಯಾರ್ಥಿಗಳಿಗೆ ಸಾರಿಗೆ ಅನಾನುಕೂಲ ಆಗದಂತೆ ಒಪ್ಪಂದದ ಮೇರೆಗೆ ಕೆಸ್​ಆರ್​ಟಿಸಿ ವತಿಯಿಂದ 50 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.