ಯಾದಗಿರಿ: ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಇಂದು ತೆರೆ ಬೀಳುವ ಮೂಲಕ ಯಾದಗಿರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದೆ.
ಯಾದಗಿರಿ ಸಹಾಯಕ ಆಯುಕ್ತ ಶಂಕರಗೌಡ ನೇತ್ರತ್ವದಲ್ಲಿ ಇಂದು ನಡೆದ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿಲಾಸ್ ಪಾಟೀಲ್, ಕಾಂಗ್ರೆಸ್ನ ಅಭ್ಯರ್ಥಿ ಮನ್ಸೂರ್ ಅಫ್ಘಾನ್ ಅವರನ್ನ 10 ಮತಗಳ ಅಂತರದಿಂದ ಪರಾಭವಗೊಳಿಸುವ ಮೂಲಕ ಅಧ್ಯಕ್ಷ ಸ್ಥಾನ ಮುಡಿಗೇರಿಸಿಕೊಂಡಿದ್ದಾರೆ. ಉಪಾಧ್ಯಕ್ಷೆಯಾಗಿ ಬಿಜೆಪಿ ಸದಸ್ಯೆ ಪ್ರಭಾವತಿ ಕಲಾಲ್ ಅವರು ಕಾಂಗ್ರೆಸ್ ಅಭ್ಯರ್ಥಿ ನಿರ್ಮಲಾ ಜಗನಾಥ ಅವರನ್ನ 10 ಮತಗಳ ಅಂತರದಿಂದ ಪರಾಭವಗೊಳಿಸುವ ಮೂಲಕ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಅಧಿಕಾರಿಗಳಿಂದ ಕೈ ಎತ್ತುವ ಮೂಲಕ ಚುನಾವಣೆ ನಡೆಸಲಾಗಿದ್ದು, ಯಾದಗಿರಿ ಶಾಸಕರಾದ ವೆಂಕಟರೆಡ್ಡಿ ಮುದ್ನಾಳ ಹಾಗೂ ರಾಯಚೂರು ಸಂಸದರಾದ ರಾಜಾ ಅಮರೇಶ್ವರ ನಾಯಕ ತಮ್ಮ ಅಭ್ಯರ್ಥಿಗಳ ಪರ ಮತ ಚಲಾಯಿಸಿದರು. 21 ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಸದಸ್ಯರಾದಾ ವಿಲಾಸ್ ಪಾಟೀಲ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಪ್ರಭಾವತಿ ಕಲಾಲ್ ಆಯ್ಕೆಯಾಗಿರುವುದನ್ನ ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ ಘೋಷಣೆ ಮಾಡಿದರು.
ಇನ್ನ ಕಾಂಗ್ರೆಸ್ನಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಮನ್ಸೂರ್ ಅಫ್ಘಾನ್ ಹಾಗೂ ಉಪಾಧ್ಯಕ್ಷ ಸ್ಥಾನದಿಂದ ಕಣಕ್ಕಿಳಿದಿದ್ದ ನಿರ್ಮಲಾ ಜಗನಾಥ್ ತಲಾ 11 ಮತಗಳನ್ನ ಪಡೆದು ಪರಾಭವಗೊಂಡರು. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸಂಸದ ಅಮರೇಶ್ವರ ನಾಯಕ ಹಾಗೂ ಶಾಸಕ ವೆಂಕಟರೆಡ್ಡಿ ಮುದ್ನಾಳ ಶುಭಕೋರಿದರು.