ಯಾದಗಿರಿ : ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 67 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 112 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,094 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 8,015 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 54 ಜನ ಮೃತಪಟ್ಟಿದ್ದಾರೆ.
ಸದ್ಯ, 1,025 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದೆ.