ETV Bharat / state

ದೇವತ್ಕಲ್ ಗ್ರಾಮಕ್ಕೆ ಯಾದಗಿರಿ ಡಿಸಿ ಭೇಟಿ: ಪರಿಶೀಲನೆ

ಸಚಿವರ ಭೇಟಿ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟು ವ್ಯವಸ್ಥೆಯನ್ನು ಕೈಗೊಳ್ಳುತ್ತಿದ್ದಾರೆ.

Yadagiri
Yadagiri
author img

By

Published : Apr 9, 2021, 10:49 PM IST

ಯಾದಗಿರಿ: ಇದೆ ತಿಂಗಳು ಏಪ್ರಿಲ್ 17 ರಂದು ಕಂದಾಯ ಸಚಿವ ಆರ್.ಅಶೋಕ್ ಅವರು ಗ್ರಾಮ ವಾಸ್ತವ್ಯ ಕೈಗೊಳ್ಳಲಿದ್ದು, ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕಂದಾಯ ಇಲಾಖೆ ಆಯೋಜಿಸಿರುವ ವಿನೂತನ ಕಾರ್ಯಕ್ರಮಕ್ಕೆ ಜಿಲ್ಲೆಯ ದೇವತ್ಕಲ್ ಗ್ರಾಮದಲ್ಲಿ ಎಲ್ಲ ರೀತಿಯಲ್ಲಿ ತಯಾರಿ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಹೇಳಿದರು.

ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಅವರು ಗ್ರಾಮಕ್ಕೆ ಭೇಟಿ ನೀಡಿ ಮೂಲ ಸೌಕರ್ಯಗಳ ಕುರಿತು ಗ್ರಾಮಸ್ಥರ ಜೊತೆಗೆ ಚರ್ಚಿಸಿ ನಂತರ ಅವರು ಮಾತನಾಡಿದರು.

ಸಚಿವರ ಭೇಟಿ ವೇಳೆ ಫಲಾನುಭವಿಗಳಿಗೆ ಕಂದಾಯ ಇಲಾಖೆ ಸಂಧ್ಯಾ ಸುರಕ್ಷಾ, ಇಂದಿರಾ ಗಾಂಧಿ ವೃದ್ಧಾಪ್ಯ, ವಿಧವಾ ವೇತನ, ವಿಕಲಚೇತನರಿಗೆ ಕೃತಕ ಕೈ ಕಾಲು, ಶ್ರವಣ ಸಾಧನ, ವೀಲ್ಹ್ ಚೇರ್, ವಾಟರ್ ಬೆಡ್‍, ಭೂ ಮಾಪನ ಇಲಾಖೆಯಿಂದ ಪೋಡಿ ಮುಕ್ತ ಗ್ರಾಮದ ಅಭಿಯಾನವನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

681 ಅರ್ಜಿಗಳು ಸ್ವೀಕಾರ 633 ಅರ್ಜಿಗಳ ವಿಲೇವಾರಿ:

ಸಚಿವರ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಏಪ್ರಿಲ್ 01 ರಿಂದ ಗ್ರಾಮಸ್ಥರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು, ಕಂದಾಯ, ಗ್ರಾಮ ಪಂಚಾಯಿತಿ, ಆಹಾರ, ಲೋಕೋಪಯೋಗಿ, ಭೂ ಮಾಪನ, ಕೃಷಿ, ತೋಟಗಾರಿಕೆ, ಶಿಕ್ಷಣ, ಪಶುಸಂಗೋಪನೆ, ವಿಕಲಚೇತನ ಸೇರಿದಂತೆ ಹಲವು ಇಲಾಖೆಗಳಿಗೆ ಸಂಬಂಧಿಸಿದ 691 ಅರ್ಜಿಗಳನ್ನು ಗ್ರಾಮಸ್ಥರು ಸಲ್ಲಿಸಿದ್ದಾರೆ.

ಇವುಗಳಲ್ಲಿ 633 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಮಟ್ಟದಲ್ಲಿ ಅರ್ಜಿಗಳು ಬಂದಿವೆ‌.

ಗ್ರಾಮಸ್ಥರಿಂದ ದೇವತ್ಕಲ್ ಗ್ರಾಮದಲ್ಲಿ ಪಿಯು ಕಾಲೇಜ್ ಸ್ಥಾಪನೆಗೆ ಪ್ರಸ್ತಾವನೆ ಬಂದಿದ್ದು ಮುಂದಿನ ದಿನಗಳಲ್ಲಿ ಕಾಲೇಜ್ ಸ್ಥಾಪನೆಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.

ಗ್ರಾಮದಲ್ಲಿ ಹಬ್ಬದ ವಾತಾವರಣ:

ಸಚಿವರ ಭೇಟಿ ಹಿನ್ನೆಲೆಯಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟು ವ್ಯವಸ್ಥೆಯನ್ನು ಕೈಗೊಳ್ಳುತ್ತಿದ್ದಾರೆ. ಗ್ರಾಮದಲ್ಲಿ ಹಬ್ಬದ ವಾತಾವರಣವಿದೆ. ಗ್ರಾಮಸ್ಥರು ಹಾಗೂ ಹೆಣ್ಣು ಮಕ್ಕಳು ಪೂರ್ಣ ಕುಂಭದೊಂದಿಗೆ ಸಚಿವರನ್ನು ಬರ ಮಾಡಿಕೊಳ್ಳುವರು.

ಗ್ರಾಮದ ಆರಾಧ್ಯ ದೈವ ಮಾನಶಪ್ಪ ಮುತ್ಯಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಎಸ್ಸಿ, ಎಸ್ಟಿ ಕಾಲೋನಿಗೆ ಭೇಟಿ ನೀಡಿ ಜನರ ಕುಂದು-ಕೊರತೆಗಳನ್ನು ಸಚಿವರು ಆಲಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ್ ಕವಿತಾಳ, ಸುರಪುರ ತಾಲೂಕಿನ ತಹಶಿಲ್ದಾರ್ ಸುಬ್ಬಣ್ಣ ಜಮಖಂಡಿ, ಹುಣಸಗಿ ತಹಶೀಲ್ದಾರ್ ವಿನಯ್ ಕುಮಾರ್ ಪಾಟೀಲ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.