ಸುರಪುರ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಇದನ್ನೂ ಓದಿ: 'ಲಾಕ್ಡೌನ್ ಮಾಡದಿದ್ದರೆ ಕೊರೊನಾ ಚೈನ್ ಲಿಂಕ್ ತುಂಡರಿಸುವುದು ಕಷ್ಟ'
ಸಭೆಯಲ್ಲಿ ಭಾಗವಹಿಸಿದ್ದ ಸುರಪುರ ಶಾಸಕ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ನರಸಿಂಹ ನಾಯಕ (ರಾಜುಗೌಡ) ಮತ್ತು ಶಹಪುರ್ ಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ್ ಅವರು ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಸರಬರಾಜು ವ್ಯತ್ಯಯ ಕುರಿತು ಚರ್ಚಿಸುವಾಗ ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.