ETV Bharat / state

ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣ ಮಾಡಿ: ಯಾದಗಿರಿ ಡಿಸಿ ಸೂಚನೆ

ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

Progress review meeting
ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ
author img

By

Published : Oct 29, 2020, 11:19 AM IST

ಯಾದಗಿರಿ: ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣ ಮಾಡಿ ಹಾಗೂ ಕಾಮಗಾರಿಗಳ ವಿವರಗಳನ್ನು ತ್ವರಿತಗತಿಯಲ್ಲಿ ಅಪ್​ಲೋಡ್​ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಇಲಾಖೆಯಲ್ಲಿ 2020 ಅಕ್ಟೋಬರ್ ತಿಂಗಳ ಜಿಲ್ಲೆಯ ಆರ್ಥಿಕ ಗುರಿ 19.349 ಕೋಟಿ ರೂ. ವಿವಿಧ ಕಾಮಗಾರಿಗಳಿಗೆ ನಿಗದಿಪಡಿಸಲಾಗಿದೆ. ಇದರಲ್ಲಿ ಇಲ್ಲಿಯವರೆಗೆ 9.58 ಕೋಟಿ ರೂ.ಗಳ ಅನುದಾನ ವಿವಿಧ ಕಾಮಗಾರಿಗಳಿಗೆ ಬಳಕೆ ಮಾಡಲಾಗಿದೆ. ನಿಗದಿಪಡಿಸಲಾದ ಗುರಿಯನ್ನು ಶೀಘ್ರವಾಗಿ ಪೂರ್ಣ ಮಾಡಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೆಆರ್​ಐ‍ಡಿಎಲ್ ಇಲಾಖೆಗೆ ಅಕ್ಟೋಬರ್ ತಿಂಗಳ 3.349 ಕೋಟಿ ರೂ. ಕಾಮಗಾರಿ ನಿಗದಿಪಡಿಸಲಾಗಿದ್ದು, ಇದರಲ್ಲಿ 1.139 ಕಾಮಗಾರಿಗಳನ್ನು ಪೂರ್ಣ ಮಾಡಲಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಇಲಾಖೆಗೆ ಅಕ್ಟೋಬರ್ ತಿಂಗಳಿಗೆ 7 ಕೋಟಿ ರೂ.ಗಳ ಕಾಮಗಾರಿಗಳಿಗೆ ಗುರಿ ನೀಡಲಾಗಿದ್ದು, ಈಗಾಗಲೇ 1.258 ಕೋಟಿ ರೂ. ಅನುದಾನವನ್ನು ಬಳಕೆ ಮಾಡಿಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.