ದೇಶದ ಅನೇಕ ಯುವ ಜನತೆಗೆ ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಬೇಕು ಎಂಬ ಹಂಬಲ ಇದೆ. ಇದೇ ಉದ್ದೇಶದಿಂದ ರಕ್ಷಣಾ ಇಲಾಖೆ ಅಗ್ನಿಪಥ್ ಎಂಬ ವಿಶೇಷ ಯೋಜನೆ ಮೂಲಕ ಅಂತಹ ಉತ್ಸಾಹಿಗಳಿಗೆ ಅವಕಾಶ ಒದಗಿಸಿದೆ. ಈ ಅಗ್ನಿಪಥ್ ಮೂಲಕ ಈಗಾಗಲೇ ಸಾವಿರಾರು ಯುವ ಜನತೆ ರಾಷ್ಟ್ರ ರಕ್ಷಣೆಗೆ ನಾಲ್ಕು ವರ್ಷ ಸೇವೆ ಸಲ್ಲಿಸುತ್ತಿದ್ದಾರೆ.
ಅಗ್ನಿಪಥ್ ಮೂಲಕ ಭೂ, ವಾಯು ಮತ್ತು ನೌಕ ಸೇನೆಯಲ್ಲಿ ಕಾಲಕಾಲಕ್ಕೆ ನೇಮಕಾತಿ ನಡೆಸಲಾಗುತ್ತಿದೆ. ಅದರ ಅನುಸಾರವಾಗಿ ಇದೀಗ ವಾಯು ಪಡೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಡೀ ದೇಶಾದ್ಯಂತ ನಡೆಸಲಾಗುವ ನೇಮಕಾತಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಅವಿವಾಹಿತ ಯುವಕ ಮತ್ತು ಯುವತಿಯರು ಈ ಅಗ್ನಿ ವೀರ್ ಹುದ್ದೆ ನೇಮಕಾತಿ ನಡೆಸಲಾಗುವುದು. ಒಟ್ಟು ಎಷ್ಟು ಹುದ್ದೆಗಳ ನೇಮಕಾತಿ ನಡೆಯಲಿದೆ ಎಂಬ ನಿರ್ದಿಷ್ಟ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿಲ್ಲ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ (ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್) ಅಥವಾ ಮೂರು ವರ್ಷಗಳ ಡಿಪ್ಲೋಮೊ ಪದವಿಯನ್ನು ಪಡೆದಿರಬೇಕು.
ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 21 ಆಗಿರಬೇಕು. ಅಂದರೆ ಅಭ್ಯರ್ಥಿಗಳು 27 ಜೂನ್ 2003ರಿಂದ 27 ಡಿಸೆಂಬರ್ 2006ರೊಳಗೆ ಜನಿಸಿದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ.
ವೇತನ: ಈ ಹುದ್ದೆಗಳಿಗೆ ಮೊದಲ ವರ್ಷದಲ್ಲಿ 30,000, ಎರಡನೇ ವರ್ಷದಲ್ಲಿ 33,000, ಮೂರನೇ ವರ್ಷದಲ್ಲಿ 36,500 ನಾಲ್ಕನೇ ವರ್ಷ 40,000 ರೂ. ವೇತನ ನಿಗದಿಪಡಿಸಲಾಗಿದೆ.
ಆಯ್ಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕಿದೆ. ಅಭ್ಯರ್ಥಿಗಳು https://agnipathvayu.cdac.in/AV/ ಈ ಜಾಲತಾಣದ ಮೂಲಕ ಅರ್ಜಿ ಭರ್ತಿ ಮಾಡಬಹುದಾಗಿದೆ. ಅಭ್ಯರ್ಥಿಗಳು 250 ರೂ. ಆನ್ಲೈನ್ ಶುಲ್ಕ ಪಾವತಿಸುವ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅನ್ಲೈನ್ ಪರೀಕ್ಷೆ, ದೈಹಿಕ ಪರೀಕ್ಷೆ, ಹೊಂದಿಕೊಳ್ಳುವಿಕೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು. ಅಭ್ಯರ್ಥಿಗಳು ಜುಲೈ 27 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 17 ಆಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೈಹಿಕ ಸಾಮರ್ಥ್ಯ ಹೇಗಿರಬೇಕು, ಎಷ್ಟು ಎತ್ತರ, ತೂಕ ಇರಬೇಕು ಸೇರಿದಂತೆ ಇನ್ನಿತರ ಮಾಹಿತಿಗಳು ಮತ್ತು ವಿವರಗಳನ್ನು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಸರಿಯಾಗಿ ಪರಿಶೀಲಿಸಿ, ಅರ್ಜಿ ಸಲ್ಲಿಸಲು ಮುಂದಾಗತಕ್ಕದ್ದು. ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ ಹಾಗೂ ಅಧಿಕೃತ ಅಧಿಸೂಚನೆಗೆ indianairforce.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: ವೇತನ 56,000! ಈ ಅರ್ಹತೆಗಳಿದ್ದರೆ ಅರ್ಜಿ ಹಾಕಿ