ಲಂಡನ್ : ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾನಿಲಯದ ಸಂಶೋಧಕರು ವಿನೂತನ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಮಾನವನ ಹೃದಯ ವೈಫಲ್ಯವನ್ನು ತ್ವರಿತವಾಗಿ ಪತ್ತೆ ಮಾಡುತ್ತದೆ.
ಸಾಂಪ್ರದಾಯಿಕ ಎಂಆರ್‌ಐ ಮೂಲಕ ಹೃದ್ರೋಗವನ್ನು ಪತ್ತೆಹಚ್ಚಲು 20 ನಿಮಿಷಗಳನ್ನು ತೆಗೆದುಕೊಂಡರೆ, ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಇತ್ತೀಚಿನ ತಂತ್ರಜ್ಞಾವು ಈ ಪ್ರಕ್ರಿಯೆಯನ್ನು ಕೇವಲ 8 ನಿಮಿಷಗಳಲ್ಲಿ ಪೂರ್ಣಗೊಳಿಸುತ್ತದೆ ಎಂದು ಸಂಶೋಧಕ ಹೊಸಮಾದಿನ್ ಅಸಾದಿ ಬಹಿರಂಗಪಡಿಸಿದ್ದಾರೆ.
ಎಂಆರ್‌ಐ ತಂತ್ರಜ್ಞಾನವನ್ನು ಬಳಸಿಕೊಂಡು ನಾವು ಹೃದಯ ರಕ್ತದ ಹರಿವಿನ 4-ಆಯಾಮದ (4-D) ಚಿತ್ರಗಳನ್ನು ಅಭಿವೃದ್ಧಿಪಡಿಸಿದ್ದೇವೆ. 'ಫೋರ್ಡಿ ಫ್ಲೋ MRI' ಎಂದು ಕರೆಯಲ್ಪಡುವ ಈ ತಂತ್ರಜ್ಞಾನವು ಹೃದಯ ಕವಾಟಗಳು ಮತ್ತು ರಕ್ತದ ಹರಿವಿನ ಅತ್ಯಂತ ನಿಖರವಾದ ಚಿತ್ರಗಳನ್ನು ಒದಗಿಸುತ್ತದೆ. ಇದರಿಂದ ಸಮಸ್ಯೆಯನ್ನು ಆಳವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಆ ಮೂಲಕ ತ್ವರಿತವಾಗಿ ಉತ್ತಮ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ಯುರೋಪಿಯನ್ ಜರ್ನಲ್ ಆಫ್ ಎಕ್ಸ್‌ಪರಿಮೆಂಟಲ್ ರೇಡಿಯಾಲಜಿಯಲ್ಲಿ ಈ ವಿವರಗಳು ಪ್ರಕಟವಾಗಿವೆ.
ಇದನ್ನೂ ಓದಿ: ಶೀಘ್ರ ಬರಲಿವೆ ಬೇಕಾದಲ್ಲಿಗೆ ನಮ್ಮನ್ನು ಕರೆದೊಯ್ಯಬಲ್ಲ ಡ್ರೋನ್