ETV Bharat / sukhibhava

ದಿನಕ್ಕೆ ಕನಿಷ್ಠ 4 ಸಾವಿರ ಹೆಜ್ಜೆ ಹಾಕಿ... ಸಾವನ್ನು ತಡೆ ಗಟ್ಟಿ..!! - ಸಾವಿನ ಅಪಾಯ ಶೇಕಡಾ 15 ರಷ್ಟು ಕಡಿಮೆ

Lower risk of death by walking: ದಿನವೊಂದಕ್ಕೆ ಕನಿಷ್ಠ ಸಾವಿರ ಹೆಜ್ಜೆ ಹಾಕುವುದರಿಂದ ಶೇ 15 ರಷ್ಟು ಸಾವುಗಳನ್ನು ತಡೆಗಟ್ಟಬಹುದಂತೆ. ಹೀಗಂತಾ ಈ ಬಗ್ಗೆ ಅಧ್ಯಯನಗಳು ಬಹಿರಂಗ ಪಡಿಸಿವೆ.

walking 3967 steps a day may cut death risk from any cause study
ದಿನಕ್ಕೆ ಕನಿಷ್ಠ 4 ಸಾವಿರ ಹೆಜ್ಜೆ ಹಾಕಿ... ಸಾವನ್ನು ತಡೆ ಗಟ್ಟಿ..!!
author img

By

Published : Aug 19, 2023, 10:51 AM IST

ನವದೆಹಲಿ: ನಿತ್ಯ ಅಗತ್ಯ ವಾಕಿಂಗ್​ ಮಾಡುವುದರಿಂದ ನಿಮ್ಮ ಆರೋಗ್ಯವನ್ನು ಗಟ್ಟಿಯಾಗಿ ಕಾಪಾಡಿಕೊಳ್ಳಬಹುದು ಎಂದು ಅಧ್ಯಯನವೊಂದರಿಂದ ದೃಢಪಟ್ಟಿದೆ. ದಿನಕ್ಕೆ ಕನಿಷ್ಠ 3967 ಹೆಜ್ಜೆಗಳನ್ನು ಹಾಕುವುದರಿಂದ ನಿಮ್ಮ ಸಾವಿನ ಅಪಾಯವನ್ನು ಆದಷ್ಟು ಕಡಿಮೆ ಮಾಡಬಹುದು ಅನ್ನುತ್ತಿದೆ ಈ ಅಧ್ಯಯನ.

ನಿತ್ಯ ನೀವು ಕನಿಷ್ಠ 2337 ಹೆಜ್ಜೆಗಳನ್ನು ಹಾಕಿದರೆ ಹೃದಯ ಸಂಬಂಧಿ ಕಾಯಿಲೆಯನ್ನು ಆದಷ್ಟು ಕಡಿಮೆ ಮಾಡಬಹುದು ಎಂಬುದನ್ನು ಕಂಡುಕೊಳ್ಳಲಾಗಿದೆ. ಈ ಸಂಬಂಧ ಸಂಶೋಧಕರು ಸುಮಾರು 2,26,889 ಜನರ ಮೇಲೆ ಈ ಅಧ್ಯಯನ ನಡೆಸಿ, ವಾಕಿಂಗ್​ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರತಿ ದಿನವೂ ಬಿರುಸಿನ ವಾಕಿಂಗ್​ ಮಾಡುವುದರಿಂದ ಹಲವು ಪ್ರಯೋಜನಗಳಿವೆ ಎಂಬುದು ಬಹಿರಂಗ ಕೂಡಾ ಆಗಿದೆ. ವಿವಿಧ 17 ಬಗೆಯ ಪ್ರಯೋಗಗಳನ್ನ ಇವರೆಲ್ಲ ಮೇಲೆ ಮಾಡಿ, ಈ ಅಂಶಗಳನ್ನು ಗುರುತಿಸಲಾಗಿದೆ.

ನೀವು ನಾಲ್ಕು ಸಾವಿರ ಹೆಜ್ಜೆಗಳನ್ನೇ ಹಾಕಬೇಕೆಂದೇನೂ ಇಲ್ಲ. ಜಸ್ಟ್​ ಸಾವಿರ ಹೆಜ್ಜೆಗಳನ್ನು ದಿನವೂ ಹಾಕಿದರೆ ಸಾಕು ಶೇ 15 ರಷ್ಟು ಅಪಾಯವನ್ನು ಕಡಿಮೆ ಮಾಡಬಹುದು ಅನ್ನುತ್ತಾರೆ ತಜ್ಞರು. ಯುರೋಪಿಯನ್ ಜರ್ನಲ್ ಆಫ್ ಪ್ರಿವೆಂಟಿವ್ ಕಾರ್ಡಿಯಾಲಜಿಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, 500 ರಿಂದ 1,000 ಹೆಜ್ಜೆಗಳನ್ನು ನಡೆಯುವುದರಿಂದ ಹೃದಯ ಕಾಯಿಲೆಗಳಿಂದ ಸಾವಿನ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂಬ ಅಂಶವನ್ನು ಗಮನಿಸಲಾಗಿದೆ.

500 ಹೆಜ್ಜೆ ನಡುಗೆ ಶೇ 7 ರಷ್ಟು ಮರಣ ಪ್ರಮಾಣ ಕಡಿಮೆ: ದಿನವೊಂದಕ್ಕೆ 1000 ಹೆಜ್ಜೆ ನಡೆಯುವುದರಿಂದ ಸಾವಿನ ಅಪಾಯವನ್ನು ಶೇಕಡಾ 15 ರಷ್ಟು ಕಡಿಮೆ ಮಾಡಬಹುದು ಎಂಬುದನ್ನು ಈ ಅಧ್ಯಯನ ಖಚಿತ ಪಡಿಸಿದೆ. ಮತ್ತೊಂದೆಡೆ, ನಿತ್ಯ ಕನಿಷ್ಠ 500 ಹೆಜ್ಜೆ ನಡೆಯುವುದರಿಂದ ಹೃದ್ರೋಗದಿಂದ ಉಂಟಾಗುವ ಮರಣವನ್ನು ಶೇಕಡಾ 7 ರಷ್ಟು ಕಡಿಮೆ ಮಾಡಬಹುದು ಅನ್ನುತ್ತೆ ಈ ವರದಿ.

ಯಾವುದೇ ಕಾರಣದಿಂದ ಸಾವುಗಳನ್ನು ಕಡಿಮೆ ಮಾಡಲು ದಿನಕ್ಕೆ ಕನಿಷ್ಠ 4000 ಹೆಜ್ಜೆಗಳಷ್ಟು ನಡೆಯುವುದರಿಂದ ಎಲ್ಲ ರೋಗಗಳಿಂದ ದೂರು ಇರಬಹುದು ಅಂತಾರೆ ಪೋಲೆಂಡ್‌ನ ಲೋಡ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಹೃದ್ರೋಗಶಾಸ್ತ್ರದ ಪ್ರಾಧ್ಯಾಪಕ ಮಾಸಿಜ್ ಬನಾಚ್​. ವಾಕಿಂಗ್​​​​ ಮಾಡುವುದು ಪುರುಷರು ಮತ್ತು ಮಹಿಳೆಯಲ್ಲಿ ಸಮಾನ ಪ್ರಭಾವ ಬೀರುತ್ತದೆ ಎನ್ನುತಾರೆ ಅವರು.

ಕಾಲುಭಾಗದಷ್ಟು ಜನ ದೈಹಿಕ ಚಟುವಟಿಕೆಯನ್ನೇ ಮಾಡಲ್ಲ: ದುರ್ದೈವದ ಸಂಗತಿ ಎಂದರೆ ವಿಶ್ವದ ಜನಸಂಖ್ಯೆಯ ಕಾಲು ಭಾಗಕ್ಕಿಂತ ಹೆಚ್ಚು ಜನರು ದೈಹಿಕ ಚಟುವಟಿಕೆಯನ್ನೇ ಮಾಡುವುದಿಲ್ಲ ಎನ್ನುತ್ತವೆ ಸಾಕಷ್ಟು ಅಧ್ಯಯನದ ವರದಿಗಳು. ಅಧ್ಯಯನದ ಪ್ರಕಾರ, ಪುರುಷರಿಗಿಂತ ಹೆಚ್ಚಿನ ಮಹಿಳೆಯರು ಮತ್ತು ಕಡಿಮೆ ಆದಾಯದ ದೇಶಗಳಿಗಿಂತ ಹೆಚ್ಚಿನ ಆದಾಯದ ದೇಶಗಳಲ್ಲಿ ಹೆಚ್ಚಿನ ಜನರು ದೈಹಿಕ ಚಟುವಟಿಕೆಯಲ್ಲಿ ತೊಡಗುವುದಿಲ್ಲ.

ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಅಂಕಿ - ಅಂಶಗಳ ಪ್ರಕಾರ, ದೈಹಿಕ ಚಟುವಟಿಕೆ ಕೊರತೆ ವಿಶ್ವದಲ್ಲಿ ಸಾವಿಗೆ ನಾಲ್ಕನೇ ಅತಿ ದೊಡ್ಡ ಕಾರಣವಾಗಿದೆ. ದೈಹಿಕ ಚಟುವಟಿಕೆಯ ಕೊರತೆಯು ಪ್ರತಿ ವರ್ಷ 3.2 ಮಿಲಿಯನ್ ಸಾವುಗಳಿಗೆ ಕಾರಣವಾಗಿದೆಯಂತೆ.

ಸುಮಾರು 7 ವರ್ಷಗಳ ಕಾಲ ವಿಶ್ಲೇಷಣೆ ನಡೆಸಿರುವ ಸಂಶೋಧಕರು ಈ ಎಲ್ಲ ಸತ್ಯಗಳನ್ನು ಪತ್ತೆ ಹಚ್ಚಿದ್ದಾರೆ. ಇದರಲ್ಲಿ 64 ವರ್ಷ ವಯೋಮಿತಿಯ ಶೇ.49 ರಷ್ಟು ಮಹಿಳೆಯರು ಭಾಗವಹಿಸಿದ್ದರು. ಇನ್ನು 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರಲ್ಲಿ ಸಾವಿನ ಅಪಾಯವು 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರಿಗಿಂತ ಕಡಿಮೆ ಎಂದು ಅಧ್ಯಯನವು ಕಂಡು ಹಿಡಿದಿದೆ.

ದಿನಕ್ಕೆ 6,000 ರಿಂದ 10,000 ಹೆಜ್ಜೆಗಳನ್ನು ನಡೆದ ಹಿರಿಯ ವಯಸ್ಕರು ತಮ್ಮ ಸಾವಿನ ಅಪಾಯವನ್ನು 42 ಪ್ರತಿಶತದಷ್ಟು ಕಡಿಮೆಗೊಳಿಸಿದರೆ, ದಿನಕ್ಕೆ 7,000 ರಿಂದ 13,000 ಹೆಜ್ಜೆಗಳನ್ನು ನಡೆದ ಕಿರಿಯ ವಯಸ್ಕರು ತಮ್ಮ ಸಾವಿನ ಅಪಾಯವನ್ನು 49 ಪ್ರತಿಶತದಷ್ಟು ಕಡಿಮೆ ಮಾಡಿದ್ದಾರೆ.(Inputs from IANS)

ಇದನ್ನು ಓದಿ: Pitta Dosha: ಪಿತ್ತ ದೋಷ ನಿವಾರಣೆಗೆ ಈ 3 ಸಲಹೆ ಪಾಲಿಸಿ, ಸಾಕು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.