ಉಕ್ರೇನ್ನಿಂದ ವಾಪಸ್ ಆದ ವಿದ್ಯಾರ್ಥಿಗಳಿಗೆ ಸ್ಟಾಲಿನ್ ಅಭಯ.. ಭಾರತದಲ್ಲಿ ವ್ಯಾಸಂಗಕ್ಕಾಗಿ ಅಗತ್ಯ ಕ್ರಮ ಎಂದ ಸಿಎಂ - ರಷ್ಯಾ ಉಕ್ರೇನ್ ವಾರ್
🎬 Watch Now: Feature Video
ತಿರುನಲ್ವೇಲಿ(ತಮಿಳುನಾಡು): ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್ಗೆ ಹೋಗಿದ್ದ ಸಾವಿರಾರು ವಿದ್ಯಾರ್ಥಿಗಳು ಉಕ್ರೇನ್ -ರಷ್ಯಾ ನಡುವಿನ ಬಿಕ್ಕಟ್ಟಿನಿಂದಾಗಿ ಇದೀಗ ವಾಪಸ್ ಆಗಿದ್ದಾರೆ. ಇದರಲ್ಲಿ ತಮಿಳುನಾಡಿನ ವಿದ್ಯಾರ್ಥಿಗಳು ಸೇರಿಕೊಂಡಿದ್ದಾರೆ. ಇವರನ್ನ ನಿನ್ನೆ ಭೇಟಿ ಮಾಡಿರುವ ಮುಖ್ಯಮಂತ್ರಿ ಸ್ಟಾಲಿನ್ ಕೆಲಹೊತ್ತು ಮಾತುಕತೆ ನಡೆಸಿದರು. ಈ ವೇಳೆ, ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ವ್ಯಾಸಂಗ ಮುಂದುವರೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕನ್ಯಾಕುಮಾರಿ ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಹಾನಿ ಪರಿಶೀಲನೆ ನಡೆಸಿದ ಬಳಿಕ ತಿರುನಲ್ವೇಲಿ ಜಿಲ್ಲೆಯಲ್ಲಿ ಉಕ್ರೇನ್ನಿಂದ ವಾಪಸ್ ಆದ ವಿದ್ಯಾರ್ಥಿಗಳನ್ನ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಉಕ್ರೇನ್ನಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನ ರಕ್ಷಣೆ ಮಾಡುವುದು ನಮ್ಮ ಗುರಿ ಎಂದಿದ್ದಾರೆ.
Last Updated : Feb 3, 2023, 8:18 PM IST