ಅಪ್ಪು ಬಗ್ಗೆ ಅಮಿತಾಭ್ ಗುಣಗಾನ.. ಬಚ್ಚನ್ಗೆ ಧನ್ಯವಾದ ತಿಳಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್ - Ashwini Puneeth rajkumar on Amitabh Bachchan
🎬 Watch Now: Feature Video
ಬೆಂಗಳೂರು: ಅಕ್ಟೋಬರ್ 21ರಂದು ಪುನೀತ ಪರ್ವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ವಿಡಿಯೋ ಸಂದೇಶದ ಮೂಲಕ ಮಾತನಾಡಿದ್ದರು. ಅಪ್ಪು ವ್ಯಕ್ತಿತ್ವ, ನಗುಮುಖದ ಬಗ್ಗೆ ಮಾತನಾಡಿದ್ದ ಅಮಿತಾಭ್ ಗಂಧದ ಗುಡಿ ಚಿತ್ರಕ್ಕೆ ಶುಭ ಹಾರೈಸಿದ್ದರು. ಇದೀಗ ಈ ವಿಡಿಯೋವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಅಮಿತಾಭ್ ಬಚ್ಚನ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಮಿತಾಭ್ ಬಚ್ಚನ್ ಅವರೇ, ನಿಮ್ಮ ಈ ಭಾವನಾತ್ಮಕ ಮಾತುಗಳಿಗೆ ಮತ್ತು ವಿಶೇಷ ಸಂದೇಶಕ್ಕೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು ಎಂದು ಅಶ್ವಿನಿ ಪೋಸ್ಟ್ ಮಾಡಿದ್ದಾರೆ.
Last Updated : Feb 3, 2023, 8:31 PM IST