'ಶ್ರೀಕೃಷ್ಣ ನನ್ನ ಕನಸಲ್ಲಿ ಬಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದಿದ್ರು': ಹೇಮಾ ಮಾಲಿನಿ - ಸಂಸದೆ ಹೇಮಾ ಮಾಲಿನಿ
🎬 Watch Now: Feature Video
ಮಥುರಾ(ಉತ್ತರ ಪ್ರದೇಶ): 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಮತ್ತೊಂದು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಪಕ್ಷದ ಗೆಲುವಿನ ಬಗ್ಗೆ ಮಥುರಾ ಬಿಜೆಪಿ ಸಂಸದೆ ಹೇಮಾ ಮಾಲಿನಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಗೆಲುವು ಎಂದಿರುವ ಅವರು, ದೇಶದಲ್ಲಿ ನಡೆಯುತ್ತಿರುವ ಸರ್ವತೋಮುಖ ಅಭಿವೃದ್ಧಿ ಕೆಲಸಕ್ಕೆ ಜನರು ಜೈಕಾರ ಹಾಕಿದ್ದಾರೆ ಎಂದರು. ಇದರ ಜೊತೆಗೆ, ಶ್ರೀಕೃಷ್ಣ ನನ್ನ ಕನಸಿನಲ್ಲಿ ಬಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾತ್ರ ರಚನೆಯಾಗಲಿದೆ ಎಂದು ಹೇಳಿದ್ದರು ಎಂದು ತಿಳಿಸಿದರು.
Last Updated : Feb 3, 2023, 8:19 PM IST