ಅಂಗನವಾಡಿ ಕೇಂದ್ರದ ಸೆಪ್ಟಿಕ್ ಟ್ಯಾಂಕ್ನಲ್ಲಿ ಬಿದ್ದು ಪುಟ್ಟ ಬಾಲಕಿ ಸಾವು - ಈಟಿವಿ ಭಾರತ ಕನ್ನಡ
🎬 Watch Now: Feature Video
ಬೀದರ್: ಅಂಗನವಾಡಿ ಕೇಂದ್ರದ ಸೆಪ್ಟಿಕ್ ಟ್ಯಾಂಕ್ನಲ್ಲಿ ಬಿದ್ದು ಪುಟ್ಟ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆ ಔರಾದ್ ಪಟ್ಟಣದ ಟೀಚರ್ಸ್ ಕಾಲೋನಿಯ ಅಂಗನವಾಡಿ ಕೇಂದ್ರದ ಮುಂಭಾಗದಲ್ಲಿ ನಡೆದಿದೆ.
3 ವರ್ಷದ ಸ್ಫೂರ್ತಿ ಎಂಬ ಬಾಲಕಿ ಊಟದ ತಟ್ಟೆ ಸಮೇತ ಸೆಪ್ಟಿಕ್ ಟ್ಯಾಂಕ್ಗೆ ಬಿದ್ದು ಸಾವನ್ನಪ್ಪಿದ್ದಾರೆ. ಟ್ಯಾಂಕ್ನ ಮೇಲ್ಛಾವಣಿ ಮುಚ್ಚದ ಕಾರಣ ಆಯಾತಪ್ಪಿ ಬಿದ್ದು ಬಾಲಕಿ ಸಾವನ್ನಪ್ಪಿದ್ದು, ಅಂಗನವಾಡಿ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಜೊತೆಗೆ ಸ್ಥಳೀಯರು, ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ತಡರಾತ್ರಿಯವರೆಗೆ ಪ್ರತಿಭಟನೆ ನಡೆಸಿದ್ದಾರೆ. ಬಾಲಕಿ ಪೋಷಕರು ಜೌರಾದ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ತೋಟದ ಮನೆಗೆ ನುಗ್ಗಿದ್ದ ಚಿರತೆಯನ್ನು ಕೂಡಿಹಾಕಿದ ಗ್ರಾಮಸ್ಥರು