ಟ್ಯಾಂಕರ್ - ಕ್ಯಾಂಟರ್ ನಡುವೆ ಅಪಘಾತ: ಚಾಲಕನ ಎರಡೂ ಕಾಲುಗಳು ಕಟ್ - ಈಟಿವಿ ಭಾರತ ಕನ್ನಡ ನ್ಯೂಸ್
🎬 Watch Now: Feature Video
ಗದಗ: ಟ್ಯಾಂಕರ್ ಹಾಗೂ ಕ್ಯಾಂಟರ್ ವಾಹನಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಇಂದು ಬೆಳಗ್ಗೆ ಜಿಲ್ಲೆಯ ಮುಂಡರಗಿ ತಾಲೂಕಿನ ಬೆಣ್ಣೆಹಳ್ಳಿ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಅಫಘಾತದಲ್ಲಿ ಟ್ಯಾಂಕರ್ ವಾಹನದಲ್ಲಿ ಚಾಲಕ ಸಿಲುಕಿಕೊಂಡಿದ್ದು, ಎರಡೂ ಕಾಲುಗಳು ತುಂಡಾಗಿರುವ ಶಂಕೆ ವ್ಯಕ್ತವಾಗಿದೆ. ರಕ್ತದ ಮಡುವಿನಲ್ಲಿದ್ದ ಚಾಲಕನನ್ನು ಪೊಲೀಸರು ಹಾಗೂ ಸ್ಥಳೀಯರು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಬಳಿಕ ಕ್ಯಾಂಟರ್ ವಾಹನದ ಚಾಲಕ ಮತ್ತು ಕ್ಲೀನರ್ ಸ್ಥಳದಿಂದ ಪರಾರಿಯಾಗಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಬೀದರ್: ರಾಜಹಂಸ ಬಸ್ ಪಲ್ಟಿ, 12 ಮಂದಿಗೆ ಗಾಯ