ಏರ್ಪೋರ್ಟ್ ರಸ್ತೆಯಲ್ಲಿ ಕಾರು ಅಪಘಾತ: ತಪ್ಪಿದ ಭಾರಿ ಅನಾಹುತ.. - Etv Bharat Kannada
🎬 Watch Now: Feature Video
ದೇವನಹಳ್ಳಿ: ಏರ್ಪೋರ್ಟ್ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿದೆ. ಹೆದ್ದಾರಿಯಲ್ಲಿ ಬರ್ತಿದ್ದ ವೇಳೆ ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ. ಏರ್ಪೋರ್ಟ್ ರಸ್ತೆಯ ಚಿಕ್ಕಜಾಲ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರು ಕಡೆಯಿಂದ ಏರ್ಪೋರ್ಟ್ಗೆ ಕಾರು ಹೋಗುತಿದ್ದ ವೇಳೆ ಏಕಾಏಕಿ ಕಾರಿನ ಟೈರ್ ಸ್ಫೋಟಗೊಂಡಿದೆ. ಇನ್ನು ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಕಡಿಮೆಯಿದ್ದ ಕಾರಣ ಭಾರಿ ಅನಾಹುತ ತಪ್ಪಿದೆ. ಕ್ಯಾಬ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:34 PM IST