ಮೆಗಾ ಡೈರಿಗೆ ಸಿಎಂ ಶಂಕುಸ್ಥಾಪನೆ: ಪೂಜೆ ಸಲ್ಲಿಸಿ ಗೋವಿನ ಕರುಗೆ ಮುತ್ತಿಟ್ಟ ಬೊಮ್ಮಾಯಿ - etv bharata kannada
🎬 Watch Now: Feature Video
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಅರಬಗೊಂಡ ಗ್ರಾಮದಲ್ಲಿ 70 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಮೆಗಾ ಡೈರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಅವರು ಗೋವಿಗೆ ಪೂಜೆ ಸಲ್ಲಿಸಿ ಬಳಿಕ ಅಕ್ಕಿ ತಿನ್ನಿಸಿ, ಗೋವಿನ ಕರುವಿಗೆ ಮುತ್ತಿಟ್ಟರು. ಸಿಎಂ ಜೊತೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಕೃಷಿ ಸಚಿವ ಬಿ.ಸಿ.ಪಾಟೀಲ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ನೆಹರು ಓಲೇಕಾರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.
Last Updated : Feb 3, 2023, 8:28 PM IST