ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಬೊಮ್ಮಾಯಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ - ಚಾಮರಾಜನಗರ ಜಿಲ್ಲಾ ಪ್ರವಾಸದಲ್ಲಿ ಸಿಎಂ ಬೊಮ್ಮಾಯಿ
🎬 Watch Now: Feature Video
ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹನೂರು ತಾಲೂಕಿನ ಶ್ರೀಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಸಿಎಂ ಮೊದಲ ಬಾರಿಗೆ ಬೆಟ್ಟಕ್ಕೆ ಭೇಟಿ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ, ಕಂದಾಯ ಸಚಿವ ಆರ್ ಅಶೋಕ್, ಶಾಸಕ ಆರ್ ನರೇಂದ್ರ ಅವರನ್ನು ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಸಂಪ್ರದಾಯದಂತೆ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡರು. ಪೂಜೆ ಸಲ್ಲಿಸಿದ ಬಳಿಕ ನಾಗಮಲೆ ಭವನದಲ್ಲಿ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು.
Last Updated : Feb 3, 2023, 8:35 PM IST