'ಮುಂದಿನ ಮುಖ್ಯಮಂತ್ರಿ' ಎಂದು ಬರೆದಿದ್ದ 75 ಕೆಜಿ ಕೇಕ್ ಕತ್ತರಿಸಿದ ಸಿದ್ದರಾಮಯ್ಯ - ಈಟಿವಿ ಭಾರತ ಕನ್ನಡ
🎬 Watch Now: Feature Video
ಮೈಸೂರು : ಇಲ್ಲಿನ ಕಲಾಮಂದಿರದಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಅವರ ಅಭಿಮಾನಿಗಳು 75 ಕೆಜಿಯ ಕೇಕನ್ನು ತಯಾರಿಸಿದ್ದರು. ಇದರಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ಬರೆಸಲಾಗಿತ್ತು. ಕೇಕ್ ಕತ್ತರಿಸಿದ ಸಿದ್ದರಾಮಯ್ಯ ಅವರಿಗೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳು ಹಾಗೂ ಮೈಸೂರು ಶಾಖಾ ಮಠದ ಶ್ರೀಗಳು ಕೇಕ್ ತಿನ್ನಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳು ಸಿದ್ದರಾಮಯ್ಯ ಪರ ಜೈಕಾರ ಕೂಗಿದರು.
Last Updated : Feb 3, 2023, 8:34 PM IST