ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ಬೃಹತ್ ದತ್ತಮಾಲಾ ಶೋಭಾಯಾತ್ರೆ ಆರಂಭ - dattamala abhiyan shobhayatra
🎬 Watch Now: Feature Video
ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಶೋಭಾಯಾತ್ರೆಯಲ್ಲಿ ದತ್ತ ವಿಗ್ರಹ ಮೆರವಣಿಗೆ ಮಾಡಲಾಗುತ್ತಿದೆ. ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ಆರಂಭವಾಗಿದ್ದು, ಸಾವಿರಾರು ದತ್ತಮಾಲಾಧಾರಿಗಳು ಭಾಗಿಯಾಗಿದ್ದಾರೆ. ಹೊರ ಜಿಲ್ಲೆಯಿಂದಲೂ ಸಾವಿರಾರು ದತ್ತ ಮಾಲಾಧಾರಿಗಳು ಆಗಮಿಸಿದ್ದು, ಬಸವನಹಳ್ಳಿ ಮುಖ್ಯರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆಯಲ್ಲಿ ಶೋಭಾಯಾತ್ರೆ ಸಾಗಲಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ದತ್ತಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನವನ್ನು ಮಾಲಾಧಾರಿಗಳು ಮಾಡಲಿದ್ದಾರೆ.
Last Updated : Feb 3, 2023, 8:32 PM IST