ತಂದೆ ಮೇಲಿನ ಹಲ್ಲೆಗೆ ಪ್ರತೀಕಾರ: ವ್ಯಕ್ತಿಗೆ ಗುಂಡು ಹಾರಿಸಿದ ಅಪ್ರಾಪ್ತ ಬಾಲಕ! ವಿಡಿಯೋ - ವ್ಯಕ್ತಿ ಮೇಲೆ ಹಾಡಹಗಲೇ ಗುಂಡಿನ ದಾಳಿ
🎬 Watch Now: Feature Video
ನವದೆಹಲಿ: ನಾಲ್ವರು ಅಪ್ರಾಪ್ತ ಹುಡುಗರು ಸೇರಿಕೊಂಡು ವ್ಯಕ್ತಿಯೊಬ್ಬನ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿದ ಘಟನೆ ನವದೆಹಲಿಯ ಜಹಾಂಗೀರಪುರಿ ಪ್ರದೇಶದಲ್ಲಿ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಗೊಳಗಾದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಏಳು ತಿಂಗಳ ಹಿಂದೆ ಬಾಲಕನೊಬ್ಬನ ತಂದೆಗೆ ಈ ವ್ಯಕ್ತಿ ಹಲ್ಲೆ ಮಾಡಿದ್ದನಂತೆ. ಇದಕ್ಕೆ ಪ್ರತೀಕಾರವಾಗಿ ಬಾಲಕ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಈ ಗುಂಡಿನ ದಾಳಿ ಮಾಡಿದ್ಧಾನೆ ಎನ್ನಲಾಗಿದೆ. ಸದ್ಯ ಈ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:25 PM IST