ವೇತನಕ್ಕಾಗಿ ಮೊಬೈಲ್ ಟವರ್ ಏರಿ ಕುಳಿತ ಜಲಮಂಡಳಿ ನೌಕರ!- ವಿಡಿಯೋ - ಅಗ್ನಿಶಾಮಕ ದಳದ ಸಿಬ್ಬಂದಿ

🎬 Watch Now: Feature Video

thumbnail

By

Published : Feb 10, 2023, 7:57 PM IST

Updated : Feb 14, 2023, 11:34 AM IST

ಧಾರವಾಡ : ಜಲಮಂಡಳಿ ನೌಕರರ ಬಾಕಿ ವೇತನ ಬಿಡುಗಡೆ ಹಾಗೂ ಮರಳಿ ಕೆಲಸಕ್ಕೆ ಸೇರ್ಪಡೆಗೆ ಆಗ್ರಹಿಸಿ ಜಲಮಂಡಳಿ ನೌಕರರೊಬ್ಬರು ಧಾರವಾಡದ ಜ್ಯುಬಿಲಿ ಸರ್ಕಲ್​ನಲ್ಲಿರುವ ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿದರು. ಮಲ್ಲಿಕಾರ್ಜುನ ತಳವಾರ ಎಂಬವರು ಟವರ್ ಏರಿ ಪ್ರತಿಭಟಿಸಿದ್ದಾರೆ. ಕಳೆದೊಂದು ವಾರದಿಂದ ನೌಕರರು ಪಾಲಿಕೆ ಆವರಣದಲ್ಲಿ ಧರಣಿ ನಡೆಸುತ್ತಿದ್ದಾರೆ. ಆದರೆ, ಇಂದು ನೌಕರರೊಬ್ಬರು ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ನೌಕರನ ಮನವೊಲಿಸಿ ಟವರ್‌ನಿಂದ ಕೆಳಗಿಳಿಸಿದರು. ಜಲಮಂಡಳಿಯ ಇತರ ನೌಕರರು ಶಾಸಕ ಅರವಿಂದ ಬೆಲ್ಲದ್​ ಹಾಗೂ ಮೇಯರ್ ಈರೇಶ ಅಂಚಟಗೇರಿ ವಿರುದ್ಧ ಧಿಕ್ಕಾರ ಕೂಗಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ತಳವಾರ, "ಬಾಕಿ ವೇತನ ಬಿಡುಗಡೆಗೊಳಿಸಬೇಕು. ಕೂಡಲೇ ನಮ್ಮನ್ನು ಕೆಲಸಕ್ಕೆ ಸೇರಿಸಿಕೊಳ್ಳಬೇಕು" ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಚಿಕ್ಕಮಗಳೂರು: ತಾಲೂಕು ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರತಿಭಟನಾಕಾರರು

Last Updated : Feb 14, 2023, 11:34 AM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.