ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೀನು ಹಿಡಿದ ಜನ.. ರಸ್ತೆ ಅವ್ಯವಸ್ಥೆ ವಿರುದ್ಧ ಕಿಡಿ - ಈಟಿವಿ ಭಾರತ ಕನ್ನಡ
🎬 Watch Now: Feature Video
ಚಾಮರಾಜನಗರ: ಸರ್ಕಾರದ ಅವ್ಯವಸ್ಥೆಯಿಂದ ಬೇಸತ್ತ ಕೆಲವರು ರಾಷ್ಟ್ರೀಯ ಹೆದ್ದಾರಿಯಲ್ಲೇ ಮೀನು ಹಿಡಿದು, ಬಟ್ಟೆ ತೊಳೆಯುವ ಮೂಲಕ ವ್ಯಂಗ್ಯವಾಡಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ರಸ್ತೆಯಲ್ಲಿ ಮೀನು ಹಿಡಿಯುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಚಾಮರಾಜನಗರ ತಾಲೂಕಿನ ಪುಣಜನೂರು-ಕೋಳಿಪಾಳ್ಯದ ನಡುವೆ ರಸ್ತೆಯಲ್ಲಿ ನೀರು ನಿಂತು ಹಳ್ಳದಂತಾಗಿದ್ದು, ಇದು ರಸ್ತೆಯಲ್ಲ, ಹಳ್ಳ ಎಂದು ಕಿಡಿಕಾರಿದ್ದಾರೆ. ಸದ್ಯ, ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Last Updated : Feb 3, 2023, 8:29 PM IST