ಬಿಎಸ್ವೈ ರಾಜಕಾರಣದಲ್ಲಿ ಸಕ್ರಿಯರಾಗಿ ಇರುತ್ತಾರೆ: ಮಾಜಿ ಸಿಎಂ ಎಸ್.ಎಂ.ಕೃಷ್ಣ - ಮಾಜಿ ಸಿಎಂ ಎಸ್ಎಂ ಕೃಷ್ಣ ಸುದ್ದಿ
🎬 Watch Now: Feature Video
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜಕಾರಣದಲ್ಲಿ ಸಕ್ರಿಯರಾಗಿ ಇರುತ್ತಾರೆ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಿಲ್ಲಲ್ಲ ಅಂತ ಹೇಳಿದ್ದಾರೆ. ರಾಜಕೀಯದಿಂದ ನಿವೃತ್ತಿ ಅಲ್ಲ. ಅವರು ರಾಜಕಾರಣದಲ್ಲಿ ಸಕ್ರಿಯವಾಗಿ ಇರುತ್ತಾರೆ ಎಂದರು. ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನಕ್ಕೆ ಫೈಟ್ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅದು ಆ ಪಕ್ಷದ ವಿಚಾರವೆಂದಷ್ಟೇ ಹೇಳಿದರು. ಇದೇ ವೇಳೆ ಎಸ್.ಎಂ ಕೃಷ್ಣ ಬಳಿಕ ಮತ್ತೊಬ್ಬ ಸಮುದಾಯದ ನಾಯಕನಿಗೆ ಅವಕಾಶ ಒದಗಿಬಂದಿದೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
Last Updated : Feb 3, 2023, 8:25 PM IST