ಗಣೇಶೋತ್ಸವ ಅಲಂಕೃತ ಮಂಟಪ ಕುಸಿತ.. ಹಲವರಿಗೆ ಗಾಯ - ಈಟಿವಿ ಭಾರತ ಕನ್ನಡ ನ್ಯೂಸ್
🎬 Watch Now: Feature Video
ವಿಜಯಪುರ: ಜಿಲ್ಲೆಯ ಸಿಂದಗಿನಗರದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಹಾಕಲಾಗಿದ್ದ ಗಣೇಶೋತ್ಸವ ಅಲಂಕೃತ ಮಂಟಪ ನೆಲಕ್ಕುರುಳಿದೆ. ಜನರ ಭಾರ ತಾಳಲಾರದೇ ಮಂಟಪ ನೆಲಕ್ಕುರುಳಿದೆ. ಘಟನೆಯಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ನಗರ ಪೊಲೀಸ್, ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಶಾಸಕ ರಮೇಶ ಭೂಸನೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Last Updated : Feb 3, 2023, 8:27 PM IST