ತುರುವೇಕೆರೆಯಲ್ಲಿ ಪಂಚರತ್ನ ರಥ ಯಾತ್ರೆ: ಡ್ರ್ಯಾಗನ್ ಫ್ರೂಟ್ ಹಾರ ಹಾಕಿ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ - ETV Bharath Kannada news
🎬 Watch Now: Feature Video
ತುಮಕೂರು: ಜಿಲ್ಲೆಯ ತುರುವೇಕೆರೆ ಕ್ಷೇತ್ರದ ಬಾಣಸಂದ್ರದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಗ್ರಾಮಸ್ಥರು ಡ್ರ್ಯಾಗನ್ ಫ್ರೂಟ್ ಹಾರ ಹಾಕಿ ಸ್ವಾಗತಿಸಿ ಸಂಭ್ರಮಿಸಿದರು. ಅಲ್ಲದೆ ಬಾಣಸಂದ್ರ ಗ್ರಾಮದ ರಸ್ತೆಯಲ್ಲಿ ಮಧ್ಯರಾತ್ರಿವರೆಗೂ ನೆರೆದಿದ್ದ ನೂರಾರು ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಕುಮಾರಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುರೇಶ್ ಬಾಬು ಸೇರಿದಂತೆ ಸ್ಥಳೀಯ ಜೆಡಿಎಸ್ ಮುಖಂಡರು ಹಾಜರಿದ್ದರು.
Last Updated : Feb 3, 2023, 8:37 PM IST