ರಾಜಕೀಯ ಗೊತ್ತಿಲ್ಲದ ಕಟೀಲ್ ತಮ್ಮ ಹೆಸರನ್ನು ಪಿಟೀಲೆಂದು ಬದಲಿಸಲಿ: ಹೆಚ್‌ಡಿಕೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ಕಾರವಾರ: ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ನೀಡಿದ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ, "ರಾಮಕೃಷ್ಣ ಹೆಗಡೆಯವರನ್ನು ಮುಖ್ಯಮಂತ್ರಿ ಮಾಡಿದ್ದೇ ದೇವೇಗೌಡರು. ನಳೀನ್ ಕುಮಾರ್ ಕಟೀಲ್ಗೆ ಸರಿಯಾಗಿ ರಾಜಕೀಯ ಗೊತ್ತಿಲ್ಲದೇ ಇದ್ದಲ್ಲಿ ಕಟೀಲ್ ಎಂದು ಹೆಸರಿಟ್ಟುಕೊಳ್ಳುವ ಬದಲು ಪಿಟೀಲು ಅಂತ ಇಟ್ಟುಕೊಳ್ಳಲಿ" ಎಂದು ವ್ಯಂಗ್ಯವಾಡಿದರು. ಗೋಕರ್ಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ನಾನು ಬ್ರಾಹ್ಮಣ ವಿರೋಧಿಯಲ್ಲ. ಹಿಂದೂ ಧರ್ಮ ರಕ್ಷಣೆಯನ್ನು ನಾವು ಮಾಡುತ್ತಿದ್ದೇವೆ. ಧರ್ಮದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಏನು ಮಾಡಿದ್ದಾರೆ ಎನ್ನುವುದು ತಿಳಿದಿದೆ" ಎಂದರು.
"ಬ್ರಾಹ್ಮಣ ಸಮುದಾಯದ ಸಮುದಾಯ ಭವನಕ್ಕೆ ನಾನು ಸಿಎಂ ಆಗಿದ್ದಾಗ ಬೆಂಗಳೂರಿನಲ್ಲಿ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಪ್ರಾಧಿಕಾರ ರಚನೆ ಮಾಡಿದ್ದೇನೆ. ಬಿಜೆಪಿ ಏನು ಮಾಡಿದೆ?, ನಮಗೆ ಸಾವರ್ಕರ್ ಸಂಸ್ಕೃತಿ ಬೇಡ ಸರ್ವೇ ಜನಃ ಸುಖಿನೋ ಭವಂತು ಅನ್ನುವ ಬ್ರಾಹ್ಮಣರು ಬೇಕು" ಎಂದರು. "ನಾವು ಎಷ್ಟು ಸ್ಥಾನ ಗೆಲ್ಲುತ್ತೇವೆ ಎನ್ನುವುದನ್ನು ಜನರು ನಿರ್ಧರಿಸುತ್ತಾರೆ. ಬಿಜೆಪಿ ನಾಯಕರು ನಿರ್ಧರಿಸುವುದಿಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ರಥಯಾತ್ರೆ ಮಾಡಲಾಗುವುದು. ಜನರ ಉತ್ತೇಜನ ಪ್ರೋತ್ಸಾಹ ಯಾತ್ರೆಗಿದೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ. ಕೆಲವರು ಪಕ್ಷ ಬಿಟ್ಟು ಹೋಗುತ್ತಾರೆ. ಅದು ಚುನಾವಣಾ ಸಂದರ್ಭದಲ್ಲಿ ಕಾಮನ್. ಆದರೆ ಜಿಲ್ಲೆಯಲ್ಲಿ ಎರಡರಿಂದ ಮೂರು ಸ್ಥಾನ ಪಕ್ಷ ಗೆಲ್ಲಲಿದೆ" ಎಂದು ಹೆಚ್‌ಡಿಕೆ ಹೇಳಿದರು.
ಇದನ್ನೂ ಓದಿ: ಜೆಡಿಎಸ್ 20 ಸ್ಥಾನ ಸಹ ಗೆಲ್ಲುವುದಿಲ್ಲ ಎನ್ನುವ ಭಯ ಕುಮಾರಸ್ವಾಮಿಗೆ ಕಾಡುತ್ತಿದೆ: ನಳಿನ್ ಕುಮಾರ್ ಕಟೀಲ್