ನಾಲ್ವರು ಯುವಕರಿಗೆ ಡಿಕ್ಕಿ ಹೊಡೆದ ಕಾರು.. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ! - ಮಧ್ಯಪ್ರದೇಶದಲ್ಲಿ ಅಪಘಾತ ಸುದ್ದಿ
🎬 Watch Now: Feature Video
ಮಧ್ಯಪ್ರದೇಶದ ಗ್ವಾಲಿಯಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿ ನಿಂತಿದ್ದ ನಾಲ್ವರು ಯುವಕರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರೂ ಯುವಕರು ಹಾರಿ ಬಿದ್ದಿದ್ದು, ಗಂಭೀರ ಗಾಯಗಳಾಗಿವೆ. ಇವರೆಲ್ಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಹೊರಬಿದ್ದಿದ್ದು, ಬಿಳಿ ಬಣ್ಣದ ಕಾರೊಂದು ವೇಗವಾಗಿ ಬಂದು ಯುವಕರಿಗೆ ಹೇಗೆ ಡಿಕ್ಕಿ ಹೊಡೆದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ವಿಶೇಷ ಎಂದರೆ, ಇಂಧನ ಸಚಿವ ಪ್ರದ್ಯುಮನ್ ತೋಮರ್ ಮನೆ ಸಮೀಪವೇ ಅಪಘಾತ ಸಂಭವಿಸಿದೆ. ಗಾಯಾಳುಗಳ ದೂರಿನ ಮೇರೆಗೆ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದುವರೆಗೂ ಆರೋಪಿ ಸಿಕ್ಕಿಬಿದ್ದಿಲ್ಲ. ಕಾರಿನ ನಂಬರ್ ಆಧರಿಸಿ ಅದರ ಮಾಲೀಕರಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
Last Updated : Feb 3, 2023, 8:23 PM IST