ಅಟ್ಟಾರಿ ವಾಘಾ ಗಡಿಯಲ್ಲಿ ಗಣರಾಜ್ಯೋತ್ಸವ ಆಚರಣೆ.. ಪಾಕ್ ಯೋಧರಿಗೆ ಸಿಹಿ ಹಂಚಿದ ಭಾರತ ಭದ್ರತಾ ಪಡೆ.. - Etv Bharat Kannada
🎬 Watch Now: Feature Video
ವಾಘಾ(ಪಂಜಾಬ್): 74ನೇ ಗಣರಾಜ್ಯೋತ್ಸವ ನಿಮಿತ್ತ ಅಟ್ಟಾರಿ ವಾಘಾ ಗಡಿಯಲ್ಲಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ಭಾರತೀಯ ಭದ್ರತಾ ಪಡೆ ಪಾಕಿಸ್ತಾನದ ಭದ್ರತಾ ಪಡೆಗಳಿಗೆ ಸಿಹಿ ಹಂಚುವ ಮೂಲಕ ವಿಶೇಷವಾಗಿ ಆಚರಣೆ ಮಾಡಿದರು. ಇನ್ನು ಬಿಎಸ್ಎಫ್ನ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸೈನಿಕರು ಗಾಯನ ಹಾಗೂ ನೃತ್ಯ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು.
ಇನ್ನು ನೇಪಾಳ ಪ್ರಧಾನ ಮಂತ್ರಿ ಪುಷ್ಪ ಕಮಲ್ ದಹಲ್ ಅವರು 74ನೇ ಗಣರಾಜ್ಯೋತ್ಸವ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ಟ್ವಿಟರ್ ’’ಭಾರತದ 74 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರ ಮತ್ತು ಭಾರತದ ಸ್ನೇಹಪರ ಜನರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮತ್ತೊಂದು ಕಡೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಹ ಗಣರಾಜ್ಯೋತ್ಸವ ಶುಭಾಶಯ ಕೋರಿದ್ದಾರೆ. ಬ್ರಿಟನ್ ವಿದೇಶಾಂಗ ಸಚಿವರು ಸಹ ಪ್ರಜಾರಾಜ್ಯೋತ್ಸವದ ಶುಭಕಾಮನೆಗಳನ್ನು ತಿಳಿಸಿದ್ದಾರೆ.
ಇದನ್ನೂ ಓದಿ: ಇಂಡೋ - ಪಾಕ್ ಯುದ್ಧದಲ್ಲಿ ಸೇವೆ ಸಲ್ಲಿಸಿದ 20 ರೂಪಾಯಿ ವೈದ್ಯನಿಗೆ ಸಂದ ಪದ್ಮಶ್ರೀ ಪ್ರಶಸ್ತಿ