ಮೈಸೂರು: ಬಾಲಕನ ಬಲಿ ಪಡೆದ ಚಿರತೆ ಬೋನಿನಲ್ಲಿ ಸೆರೆ - ETV Bharat Kannada News

🎬 Watch Now: Feature Video

thumbnail

By

Published : Jan 26, 2023, 12:49 PM IST

Updated : Feb 3, 2023, 8:39 PM IST

ಮೈಸೂರು : ಜನವರಿ 21ರಂದು ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಬಾಲಕನನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಗ್ರಾಮ ಹೊರವಲಯದಲ್ಲಿ ಇಂದು ಮುಂಜಾನೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರಿತೆ ಬಿದ್ದಿದೆ. ಸ್ಥಳದಲ್ಲಿ ಜನರು ಮುಗಿಬಿದ್ದರು. ಇಲಾಖೆ ಅಧಿಕಾರಿಗಳು ಆಗಮಿಸಿದ್ದರು. 

ಈ ಸಂದರ್ಭದಲ್ಲಿ ಬಾಲಕನ ಕೊಂದು ಹಾಕಿದ ಚಿರತೆಯನ್ನು ಕೊಲ್ಲುವಂತೆ ಗ್ರಾಮಸ್ಥರು ಅಧಿಕಾರಿಗಳನ್ನು ಆಗ್ರಹಿಸಿದರು. ಸ್ವಲ್ಪ ಹೊತ್ತು ಮಾತಿನ ಚಕಮಕಿಯೂ ನಡೆಯಿತು. ಸೆರೆ ಸಿಕ್ಕ ಚಿರತೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ವಿವರ: 11 ವರ್ಷದ ಬಾಲಕ ಜಯಂತ್​ ಜ.21 ರಂದು ರಾತ್ರಿ ಬಯಲು ಶೌಚಕ್ಕಾಗಿ ಮನೆಯಿಂದ ಹೊರ ಬಂದಿದ್ದ. ಈ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿ ಎಳೆದೊಯ್ದಿತ್ತು. ಈ ವಿಷಯ ಗ್ರಾಮಸ್ಥರಿಗೆ ತಿಳಿಯುತ್ತಿದ್ದಂತೆ ಇಡೀ ರಾತ್ರಿ ಶೋಧ ಕಾರ್ಯ ಕೈಗೊಂಡಿದ್ದರು. ಆದರೆ ಬಾಲಕನ ಮೃತದೇಹವಾಗಲೀ ಮತ್ತು ಚಿರತೆಯಾಲೀ ಪತ್ತೆಯಾಗಿರಲಿಲ್ಲ. 

ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ರಾತ್ರೋರಾತ್ರಿ ಸ್ಥಳಕ್ಕೆ ಶಾಸಕರು, ಡಿಸಿ ಆಗಮಿಸಿದ್ದರು. ಮರುದಿನ ಬಾಲಕನ ಮೃತದೇಹ ಪತ್ತೆಯಾಗಿತ್ತು. ರುಂಡ ಹಾಗು ದೇಹದ ಇತರೆ ಭಾಗಗಳನ್ನು ಚಿರತೆ ತಿಂದು ಹಾಕಿರುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಚಿರತೆ ದಾಳಿಗೆ ಬಾಲಕ ಬಲಿ, ಗ್ರಾಮದ ಸಮೀಪ ಶವ ಪತ್ತೆ     

Last Updated : Feb 3, 2023, 8:39 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.