ಹಾವೇರಿಯಲ್ಲಿ ಬಸ್ಗಳ ನಡುವೆ ಡಿಕ್ಕಿ.. ಶಾಲಾ ವಿದ್ಯಾರ್ಥಿಗಳು ಸೇರಿ 30ಕ್ಕೂ ಹೆಚ್ಚು ಜನರಿಗೆ ಗಾಯ! - ಹಾವೇರಿ ಬಸ್ ಅಪಘಾತ ಸುದ್ದಿ
🎬 Watch Now: Feature Video
ಸಾರಿಗೆ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾನಗಲ್ ತಾಲೂಕಿನ ಚೀರನಹಳ್ಳಿ ಗ್ರಾಮದ ಬಳಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಮೂವತ್ತು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹಾನಗಲ್ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Last Updated : Feb 3, 2023, 8:24 PM IST