ಬಂಡವಾಳ ಹೂಡಿಕೆ ಸಮಾವೇಶದಲ್ಲಿ ವಸ್ತು ಪ್ರದರ್ಶನ ವೀಕ್ಷಿಸಿದ ಸಿಎಂ ಬೊಮ್ಮಾಯಿ

By

Published : Nov 3, 2022, 2:02 PM IST

Updated : Feb 3, 2023, 8:31 PM IST

thumbnail

ಬೆಂಗಳೂರು : ಕೈಗಾರಿಕಾ ವಲಯದಲ್ಲಿ ಹೊಸ ಕ್ರಾಂತಿ ಸೃಷ್ಟಿಸುವ ನಿರೀಕ್ಷೆಯೊಂದಿಗೆ 'ಬಿಲ್ಡ್‌ ಫಾರ್‌ ದಿ ವರ್ಲ್ಡ್’ ಪರಿಕಲ್ಪನೆಯೊಂದಿಗೆ ಬಂಡವಾಳ ಹೂಡಿಕೆ ಸಮಾವೇಶ ನಿನ್ನೆ ಆರಂಭವಾಗಿದೆ. ಮೂರು ದಿನಗಳ ಕಾಲ ನಡೆಯುವ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಆಗಿ ಚಾಲನೆ ನೀಡಿದರು. ರಾಜ್ಯದಲ್ಲಿ ಈ ಬಾರಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಹೇಳಿದ್ದಾರೆ. ಇನ್ವೆಸ್ಟ್‌ ಕರ್ನಾಟಕ 2022 ಜಾಗತಿಕ ಸಮಾವೇಶಕ್ಕೆ ಫ್ರಾನ್ಸ್, ನೆದರ್ಲ್ಯಾಂಡ್, ಜರ್ಮನಿ, ಜಪಾನ್ ಸೇರಿದಂತೆ 50 ಕ್ಕೂ ಹೆಚ್ಚು ದೇಶಗಳು ಭಾಗಿಯಾಗಿವೆ. ಎಂಎಸ್‌ಎಂಇ ಮತ್ತು ಇತರ ವಲಯದ ಕೈಗಾರಿಕಾ ವಸ್ತು ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಸಮಾವೇಶದಲ್ಲಿ ಸುಮಾರು ಎಂಟನೂರಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದೆ. ಸಮಾವೇಶದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಣೆ ಮಾಡಿದರು.

Last Updated : Feb 3, 2023, 8:31 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.