ತುಮಕೂರಿನಲ್ಲಿ ಪಂಚರತ್ನ ಯಾತ್ರೆ ಪುನಾರಂಭ: ಹೆಚ್‌ಡಿಕೆಗೆ ಹೂಮಳೆ, ಬೃಹತ್ ಸೇಬಿನ ಹಾರ - etv bharat kannada
🎬 Watch Now: Feature Video
ತುಮಕೂರು: ಜಿಲ್ಲೆಯಲ್ಲಿ ಅರ್ಧಕ್ಕೆ ನಿಂತಿದ್ದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಇಂದಿನಿಂದ ಪುನಾರಂಭಗೊಂಡಿದೆ. ತುರುವೇಕೆರೆ ಪಟ್ಟಣದ ಟಿಬಿ ಸರ್ಕಲ್ ಬಳಿ ಯಾತ್ರೆ ಆಗಮಿಸುತ್ತಿದ್ದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಜಯಘೋಷ ಮೊಳಗಿಸಿದರು. ಹೆಚ್‌ಡಿಕೆಗೆ ಹೂಮಳೆ ಸುರಿಸಿ, ಹೊಂಬಾಳೆ ಮತ್ತು ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಿದರು. ಜೆಡಿಎಸ್ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹಾಜರಿದ್ದರು. ಇಂದಿನಿಂದ ಜಿಲ್ಲೆಯಲ್ಲಿ ಸಂಚರಿಸಲಿರುವ ಯಾತ್ರೆ ಚಿಕ್ಕನಾಯಕನಹಳ್ಳಿ, ಕುಣಿಗಲ್, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಸಾಗಲಿದೆ.
Last Updated : Feb 3, 2023, 8:37 PM IST