ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆ.. - ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿಯಾಗಿ ಗಣರಾಜ್ಯೋತ್ಸವ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17587530-thumbnail-3x2-vny.jpg)
ಹೈದರಾಬಾದ್ : 74ನೇ ಗಣರಾಜ್ಯೋತ್ಸವದ ನಿಮಿತ್ತ ಇಂದು ವಿಶ್ವ ಪ್ರಸಿದ್ದ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ರಾಮೋಜಿ ಸಮೂಹ ಸಂಸ್ಥೆಯ ಅಧ್ಯಕ್ಷರಾದ ರಾಮೋಜಿ ರಾವ್ ಧ್ವಜರೋಹಣ ನೆರವೇರಿಸಿದರು. ಬಳಿಕ ಫಿಲಂ ಸಿಟಿಯ ಸಿಬ್ಬಂದಿಗಳಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಮೋಜಿ ಫಿಲ್ಮ್ ಸಿಟಿ ಎಂಡಿ ವಿಜಯೇಶ್ವರಿ, ಈಟಿವಿ ಭಾರತ್ ನಿರ್ದೇಶಕಿ ಬೃಹತಿ, ರಾಮೋಜಿ ಸಮೂಹ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದರು.
ಇದನ್ನೂ ಓದಿ: ತೆಲಂಗಾಣ: ರಾಜಭವನದಲ್ಲಿ ನಡೆದ ಗಣರಾಜ್ಯೋತ್ಸವ ಧ್ವಜಾರೋಹಣಕ್ಕೆ ಸಿಎಂ ಕೆಸಿಆರ್ ಗೈರು
Last Updated : Feb 3, 2023, 8:39 PM IST