ಹಾಸನ: ಸ್ವಪಕ್ಷ ಕಾರ್ಯಕರ್ತನ ಮೇಲೆ ಬಿಜೆಪಿಯ ಗ್ರಾಮಾಂತರ ಉಪಾಧ್ಯಕ್ಷರಿಂದ ಹಲ್ಲೆ - ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆ
🎬 Watch Now: Feature Video
ಹಾಸನ: ಬಿಜೆಪಿ ಗ್ರಾಮಾಂತರ ಉಪಾಧ್ಯಕ್ಷ ಅಣ್ಣನಾಯಕನಹಳ್ಳಿ ವಿಜಯ್ ಕುಮಾರ್ ಮತ್ತು ಆತನ ಕಾರು ಚಾಲಕ ಸಿಂಗ್ ಎಂಬಾತ ತಮ್ಮದೇ ಪಕ್ಷದ ಕಾರ್ಯಕರ್ತನ ಮೇಲೆ ನಡುರಸ್ತೆಯಲ್ಲೇ ಬೆತ್ತದಿಂದ ಹಲ್ಲೆ ಮಾಡಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದಲ್ಲಿ ಬುಧವಾರ ಘಟನೆ ನಡೆದಿದೆ. ಅರಸೀಕೆರೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಜಯ್ ಕುಮಾರ್ ಹಾಗು ಕಾರು ಚಾಲಕನನ್ನು ಬಂಧಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಅರುಣ್ ಕುಮಾರ್ ಎಂಬಾತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯ ದ್ವೇಷದಿಂದಾಗಿ ಹಲ್ಲೆ ಮಾಡಿದ್ದಾರೆ ಎಂದು ಗಾಯಾಳು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ಪ್ರಕರಣದಲ್ಲಿ ದಾಖಲಿಸಿದ್ದಾರೆ.
ಇದನ್ನೂ ಓದಿ: ದಿಢೀರ್ ಕುಸಿದು ಬಿದ್ದ 6 ಮನೆ, ಹೆಣ್ಣು ಮಗು ಸಾವು: ಬೆಳಗಿನ ಜಾವ ನಡೀತು ದುರಂತ
Last Updated : Feb 3, 2023, 8:39 PM IST