ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿಕೊಂಡ ವಿದ್ಯಾರ್ಥಿನಿ - ರೈಲ್ವೆ ಸಿಬ್ಬಂದಿ
🎬 Watch Now: Feature Video
ಆಂಧ್ರಪ್ರದೇಶ: ವಿಶಾಖ ದುವ್ವಾಡ ರೈಲು ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬರು ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿಕೊಂಡಿದ್ದಾರೆ. ರೈಲಿನಿಂದ ಇಳಿಯುತ್ತಿದ್ದಾಗ ಘಟನೆ ನಡೆದಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಯವತಿ ರೈಲು ಮತ್ತು ಪ್ಲಾಟ್‌ಫಾರ್ಮ್ ಮಧ್ಯೆ ಸಿಕ್ಕಿಹಾಕಿಕೊಂಡಿದ್ದು, ಬಳಿಕ ರೈಲ್ವೆ ಸಿಬ್ಬಂದಿ ಪ್ಲಾಟ್ ಫಾರಂ ಒಡೆದು ಯುವತಿಯನ್ನು ರಕ್ಷಿಸಿದ್ದಾರೆ. ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಗೊಂಡ ಯುವತಿಯನ್ನು ಅಣ್ಣಾವರದ ಶಶಿಕಲಾ ಎಂದು ಗುರುತಿಸಲಾಗಿದ್ದು, ದುವ್ವಾಡ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಸಿಎ ವ್ಯಾಸಂಗ ಮಾಡುತ್ತಿದ್ದಾಳೆ. ಸದ್ಯಕ್ಕೆ ಬಾಲಕಿ ಆರೋಗ್ಯವಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated : Feb 3, 2023, 8:35 PM IST