ವಿಜಯನಗರ: ಧಗಧಗನೆ ಹೊತ್ತಿ ಉರಿದ ಡೀಸೆಲ್ ಟ್ಯಾಂಕರ್, ಬೆಂಕಿಗೆ ಸಿಲುಕಿ ಬೈಕ್​ ಸವಾರ ಸಾವು - fire on tanker in vijayanagara

🎬 Watch Now: Feature Video

thumbnail

By

Published : Jul 24, 2022, 12:14 PM IST

Updated : Feb 3, 2023, 8:25 PM IST

ವಿಜಯನಗರ: ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಎದುರಿನಿಂದ ಬರುತ್ತಿದ್ದ ಬೈಕ್​ ಸವಾರ ಸಜೀವ ದಹನವಾದ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ರೈಲ್ವೇ ಗೇಟ್ ಬಳಿ ನಡೆದಿದೆ. ಬೈಕ್​ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿದರೂ ಕೂಡ ಸಾಧ್ಯವಾಗದೆ ಅವಘಡ ಸಂಭವಿಸಿದೆ. ಬೆಂಕಿಗೆ ಸಿಲುಕಿದ ಬೈಕ್​ ಸವಾರ ಹಗರಿ ಬೊಮ್ಮನಹಳ್ಳಿ ತಾಲೂಕಿನ ಹಂಪಪಟ್ನಾ ಗ್ರಾಮದ ನಾಗರಾಜ್​(35) ಎಂಬಾತ ಸ್ಥಳದಲ್ಲೇ ಸಜೀವ ದಹನವಾಗಿದ್ದಾನೆ. ಬೈಕ್​ನಲ್ಲಿದ್ದ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಹರಪನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಚಾಲಕ​​ ವಾಹನದಿಂದ ಜಿಗಿದು ಪಾರಾಗಿದ್ದು, ದಾವಣಗೆರೆಯಿಂದ ಹರಪ್ಪನಹಳ್ಳಿಗೆ ಬರುತ್ತಿದ್ದಾಗ ಅವಘಡ ಸಂಭವಿಸಿದೆ. ಹರಪ್ಪನಹಳ್ಳಿ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
Last Updated : Feb 3, 2023, 8:25 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.