ರೋಸ್ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಯುವತಿ!-ವಿಡಿಯೋ - ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ ಮೃತ ಯುವತಿ
🎬 Watch Now: Feature Video
ಉಡುಪಿ: ಮದುವೆ ಮುನ್ನ ನಡೆಯುವ ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಹಾವಂಜೆಯಲ್ಲಿ ನಡೆದಿದೆ. ಹಾವಂಜೆ ನಿವಾಸಿ ಜೋಸ್ನಾ ಲೂವಿಸ್(23) ಮೃತ ಯುವತಿ. ಜೋಸ್ನಾ ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಸಮಾರಂಭದಲ್ಲಿ ನೃತ್ಯ ಮಾಡಿಕೊಂಡು ಬರುತ್ತಿರುವಾಗ ಹಠಾತ್ ಕುಸಿದುಬಿದ್ದಿದ್ದಾರೆ. ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
Last Updated : Feb 3, 2023, 8:33 PM IST