ಶಿವಮೊಗ್ಗ ಕೊಲೆ ಪ್ರಕರಣ ಖಂಡಿಸಿ ಬೀದರ್ನಲ್ಲಿ ಪ್ರತಿಭಟನೆ - Protest by condemning Shimoga murder case
🎬 Watch Now: Feature Video
ಬೀದರ್: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಬೀದರ್ನಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಗಣೇಶ ಮೈದಾನದಿಂದ ನೂರಾರು ಕಾರ್ಯಕರ್ತರು ಕೇಸರಿ ಶಾಲು ಧರಿಸಿ, ಕೇಸರಿ ಧ್ವಜ ಹಿಡಿದು ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು. ನಂತರ ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಕೊಲೆಯಾಗ್ತಿವೆ. ತಪ್ಪಿತಸ್ಥ ಆರೋಪಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕೆಂಬ ಮನವಿ ಪತ್ರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.
Last Updated : Feb 3, 2023, 8:17 PM IST