ಸರ್ಕಾರಿ ಭೂಮಿ ಒತ್ತುವರಿ ಆರೋಪ: ಇಬ್ಬರ ನಡುವೆ ಹೊಡೆದಾಟ- ವಿಡಿಯೋ - ಬೆಂಗಳೂರನಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಮಾರಾಮಾರಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14880067-thumbnail-3x2-madmd.jpg)
ಸರ್ಕಾರಿ ಭೂಮಿ ಒತ್ತುವರಿ ಸಂಬಂಧ ಇಬ್ಬರ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನಡೆದಿದೆ. ಮಲ್ಲಸಂದ್ರದ ಸರ್ವೇ ನಂ 30ರಲ್ಲಿ ಗುಟ್ಟೆ ಜಮೀನನ್ನು ಸೋಮಶೇಖರ್ ಎಂಬುವರು ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣಕ್ಕೆ ಮುಂದಾಗಿದ್ದರೆಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಹ್ಲಾದ್ ಎಂಬುವವರು ಪ್ರಶ್ನಿಸಿದ್ದಾರೆ. ಜೆಡಿಎಸ್ ಮುಖಂಡ ಗೋಪಾಲ್ ಎಂಬಾತ ಸೋಮಶೇಖರ್ ಪರ ನಿಂತು ಗಲಾಟೆ ನೆಡೆಸಿದ್ದಾರೆ ಎನ್ನಲಾಗಿದೆ. ಮಾತಿನ ಚಕಮಕಿ ತಾರಕಕ್ಕೇರಿದ ಕಾರಣ ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:21 PM IST