ಬೆಳಗಾವಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ - ಖಾಸಗಿ ಕೋ-ಆಪರೇಟಿವ್ ಸೊಸೈಟಿ ಬ್ಯಾಂಕ್ ನೌಕರ ವಿಶಾಲ ಪಾಟೀಲ್ ಎಂಬುವರಿಗೆ ಸೇರಿದ ಕಾರು
🎬 Watch Now: Feature Video
ಬೆಳಗಾವಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ, ದಟ್ಟಹೊಗೆ ಕಾಣಿಸಿಕೊಂಡ ಘಟನೆ ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ನಡೆದಿದೆ. ಆಕಸ್ಮಿಕ ಬೆಂಕಿ ತಗಲುತ್ತಿದ್ದಂತೆಯೇ ಕಾರು ನಿಲ್ಲಿಸಿ ಚಾಲಕ ಹೊರ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಖಾಸಗಿ ಕೋ - ಆಪರೇಟಿವ್ ಸೊಸೈಟಿ ಬ್ಯಾಂಕ್ ನೌಕರ ವಿಶಾಲ ಪಾಟೀಲ್ ಎಂಬುವರಿಗೆ ಸೇರಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚನ್ನಮ್ಮ ವೃತ್ತದಲ್ಲಿದ್ದ ಪೊಲೀಸರು ನೀಡಿದ ಮಾಹಿತಿ ಮೇರೆಗೆ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಸ್ಥಳೀಯ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಗೆ ಸಾಥ್ ನೀಡಿದರು.
Last Updated : Feb 3, 2023, 8:22 PM IST