ಎಸ್‌ಡಿಒ ಕಚೇರಿಯಲ್ಲಿ ಇಬ್ಬರಿಗೆ ಹಿಗ್ಗಾಮುಗ್ಗಾ ಥಳಿತ: ವಿಡಿಯೋ ವೈರಲ್ - ಎಸ್‌ಡಿಒ ಕಚೇರಿಯಲ್ಲಿ ಇಬ್ಬರಿಗೆ ಹಿಗ್ಗಾಮುಗ್ಗಾ ಥಳಿತ
🎬 Watch Now: Feature Video

ಮುನಕ್ (ಹರಿಯಾಣ): ಹರಿಯಾಣದ ಮುನಾಕ್‌ನ ಎಸ್‌ಡಿಒ ಕಚೇರಿಯಲ್ಲಿ ಇಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಹೀಗೆ ಥಳಿಸಿದ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಥಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಪರಿಚಿತ ವ್ಯಕ್ತಿಗಳು ಇಬ್ಬರನ್ನ ಹಿಗ್ಗಾಮುಗ್ಗಾ ಥಳಿಸುತ್ತಿರುವುದು ದೃಶ್ಯಗಳಲ್ಲಿದೆ. ಸಿಸಿ ಟಿವಿಯಲ್ಲಿ ಸೆರೆಯಾದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 3 ಜನರನ್ನು ಬಂಧಿಸಿದ್ದಾರೆ.