ವಡೋದರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾದ 5 ಐಷಾರಾಮಿ ಕಾರುಗಳು!

By

Published : Nov 23, 2020, 10:35 AM IST

thumbnail
ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಗುಜರಾತ್​​ ರಾಜ್ಯ ಸರ್ಕಾರ ಅಹಮದಾಬಾದ್, ರಾಜ್‌ಕೋಟ್, ವಡೋದರಾ ಮತ್ತು ಸೂರತ್‌ನಲ್ಲಿ ಕರ್ಫ್ಯೂ ವಿಧಿಸಿದೆ. ಇತ್ತ ದೀಪಾವಳಿ ಆಚರಿಸಲು ಊರಿಗೆ ಹೋಗಿದ್ದವರು, ಈಗ ತಮ್ಮ-ತಮ್ಮ ಮನೆಗಳಿಗೆ ಮರಳುತ್ತಿದ್ದಾರೆ. ಈ ಹಿನ್ನೆಲೆ ವಾಹನ ಸಂಚಾರ ಹೆಚ್ಚಾಗಿದೆ. ಈ ಮಧ್ಯೆ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ -8 ರಲ್ಲಿ ವಡೋದರಾದಿಂದ ಸೂರತ್‌ಗೆ ಪ್ರಯಾಣಿಸುತ್ತಿದ್ದ 5 ಐಷಾರಾಮಿ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಕರ್ಜನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.