ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅನಾಹುತ - ರಾಜಬಜಾರ್‌ನ ಚವಾಲ್ ಪ್ಯಾಟಿ
🎬 Watch Now: Feature Video

ಕೋಲ್ಕತ್ತಾ(ಪಶ್ಚಿಮ ಬಂಗಾಳ): ರಾಜಬಜಾರ್‌ನ ಚವಾಲ್ ಪಟ್ಟಿ ಬಳಿಯ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. 12 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅಮ್ಹೆರ್ಸ್ಟ್ ಪೊಲೀಸ್ ಠಾಣೆಯ ಸಿಬ್ಬಂದಿ ಕೂಡ ಸ್ಥಳಕ್ಕೆ ಧಾವಿಸಿದ್ದಾರೆ. ಸಮೀಪದ ಕೊಳಗೇರಿ ಪ್ರದೇಶದಿಂದಾಗಿ ಈ ಬೆಂಕಿ ಅನಾಹುತ ನಡೆದಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.