ಆಸ್ಪತ್ರೆಯಲ್ಲಿ ವೈದ್ಯರ ಸಹಾಯವಿಲ್ಲದೆ ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ! - ganjam
🎬 Watch Now: Feature Video
ಒಡಿಶಾ: ವೈದ್ಯಕೀಯ ಸಿಬ್ಬಂದಿಯ ಸಹಾಯವಿಲ್ಲದೆ ಕೋವಿಡ್ ಸೋಂಕಿತ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿರುವ ಘಟನೆ ಒಡಿಶಾದ ಗಂಜಮ್ ಜಿಲ್ಲೆಯಲ್ಲಿ ನಡೆದಿದೆ. ಹೆರಿಗೆಗೆಂದು ಇಲ್ಲಿನ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಯಾವೊಬ್ಬ ಸಿಬ್ಬಂದಿಯೂ ಆಕೆಯ ಬಳಿ ಸುಳಿಯಲಿಲ್ಲ. ಹೀಗಾಗಿ ಯಾರ ನೆರವಿಲ್ಲದೆ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆ ನೋವಿನಿಂದ ಬಳಲುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವೈದ್ಯರ ನಡೆಗೆ ಜನರು ಛೀಮಾರಿ ಹಾಕುತ್ತಿದ್ದಾರೆ.