ಪುಣೆ ಬೆಂಗಳೂರು ಹೈವೆಯಲ್ಲಿ ಅಪಘಾತ: ಸ್ಥಳದಲ್ಲೇ ಆರು ಜನರ ಸಾವು!

By

Published : Sep 12, 2019, 10:44 AM IST

thumbnail

ಪುಣೆ-ಬೆಂಗಳೂರು ಹೈವೆಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆರು ಜನರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್​ ಸತಾರಾ ಬಳಿ ಟ್ರಕ್​ ಹಿಂಬದಿಗೆ ಗುದ್ದಿದೆ. ಪರಿಣಾಮ ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ಆರು ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.