ರೈಲಿನ ಮೂರು ಬೋಗಿಗಳು ಹೊತ್ತಿ ಉರಿದ ವಿಡಿಯೋ ವೈರಲ್ - Amritsar-bound train catches fire,
🎬 Watch Now: Feature Video
ಅಮೃತ್ಸರ್ ಮೂಲದ ರೈಲಿನ ಮೂರು ಬೋಗಿಗಳು ಬೆಂಕಿಗಾಹುತಿಯಾಗಿದ್ದು, ಕೆಲವೇ ಕ್ಷಣಗಳ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಂಜಾಬ್ನ ಜಲಂಧರ್ ಜಿಲ್ಲೆಯ ಕರ್ತಾರ್ಪುರ್ ಬಳಿ ನಡೆದಿದೆ. ಸುಮಾರು ನಾಲ್ಕೈದು ಗಂಟೆಗಳ ಕಾಲ ಬೆಂಕಿ ಹೊತ್ತಿ ಉರಿದಿದ್ದು, ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಯಿತು. ಬೆಂಕಿ ಹೊತ್ತಿಕೊಂಡಿರುವುದರ ಬಗ್ಗೆ ತನಿಖೆ ಕೈಗೊಳ್ಳುವುದಾಗಿ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿಡಿಯೋ ನೋಡಿದ ನೆಟ್ಟಿಗರು ಭಯಭೀತರಾಗಿದ್ದಾರೆ.