ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ! - ಭಾರತೀಯ ಕಿಸಾನ್ ಯೂನಿಯನ್
🎬 Watch Now: Feature Video
ಗಾಜಿಪುರ್(ದೆಹಲಿ-ಉತ್ತರ ಪ್ರದೇಶ): ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕೈಟ್ ವ್ಯಕ್ತಿಯೋರ್ವನಿಗೆ ಕಪಾಳಮೋಕ್ಷ ಮಾಡಿದ್ದಾರೆ. ದೆಹಲಿ-ಉತ್ತರ ಪ್ರದೇಶ ಗಾಜಿಪುರ್ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ವ್ಯಕ್ತಿಯೋರ್ವ ಪ್ರತಿಭಟನಾ ಸ್ಥಳಕ್ಕಾಗಮಿಸಿದ್ದಾನೆ. ಕೈಯಲ್ಲಿ ಕಟ್ಟಿಗೆ ಹಿಡಿದು ಮಾಧ್ಯಮಗಳೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದನಂತೆ. ಹೀಗಾಗಿ ಆತನ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿಸಿದ್ದಾರೆ. ಜತೆಗೆ ಕೆಟ್ಟ ಉದ್ದೇಶದಿಂದ ಇಲ್ಲಿಗೆ ಬಂದವರೆಲ್ಲರೂ ಹೊರಡಬೇಕು ಎಂದು ಮನವಿ ಮಾಡಿದ್ದಾರೆ.